ತಂಬಾಕು ಉತ್ಪನ್ನಗಳ ಮಾರಾಟ ಅಂಗಡಿಗಳ ಮೇಲೆ ತಂಬಾಕು ತನಿಖಾ ದಳ ದಾಳಿ

ಹೊನ್ನಾಳಿ:

          ಅತಿಯಾದ ತಂಬಾಕು ಸೇವನೆಯಿಂದ ಯುವಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಯುವಜನತೆ ಹಾಳಾದರೆ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುವುದಿಲ್ಲ ಎಂದು ತಹಸೀಲ್ದಾರ್ ತುಷಾರ್ ಬಿ.ಹೊಸೂರು ಹೇಳಿದರು.ತಾಲೂಕಿನ ಗೋವಿನಕೋವಿ ಮತ್ತು ಚೀಲೂರು ಗ್ರಾಮಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ವಿವಿಧ ಅಂಗಡಿಗಳ ಮೇಲೆ ಕೋಟ್ಪಾ-2003ರ ಕಾಯ್ದೆಯಡಿ ತಾಲೂಕು ತಂಬಾಕು ತನಿಖಾ ದಳ, ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ದಾಳಿ ಮಾಡಿದ ಬಳಿಕ ಅವರು ಮಾತನಾಡಿದರು.

           ತಂಬಾಕು ನಿಯಂತ್ರಣ ಘಟಕದ ಸಲಹೆಗಾರ ಸತೀಶ್ ಕಲಹಾಳ ಮಾತನಾಡಿ, ಪ್ರತಿ ಅಂಗಡಿಯ ಮಾರಾಟಗಾರರು ಹಾಗೂ ಸಾರ್ವಜನಿಕರಿಗೆ ತಂಬಾಕು ಉತ್ಪನ್ನಗಳ ಬಳಕೆಯಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಗಳ ಬಗ್ಗೆ ಅರಿವು ಮೂಡಿಸಿದರು.
ನ್ಯಾಮತಿ ತಾಲೂಕು ಉಪ ತಹಸೀಲ್ದಾರ್ ನ್ಯಾಮತಿ ನಾಗರಾಜ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜಗದೀಶ್ ಕೋಡಿಹಳ್ಳಿ, ಹಿರಿಯ ಆರೋಗ್ಯ ಸಹಾಯಕಿ ಹಾಲಮ್ಮ, ಶಿಶು ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಮಂಜುಳಾ, ಗೋವಿನಕೋವಿ ಉಪ ತಹಸೀಲ್ದಾರ್ ನಂದ್ಯಪ್ಪ ಸೇರಿದಂತೆ ಪೊಲೀಸ್ ಇಲಾಖೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.ಅಕ್ರಮ ತಂಬಾಕು ಉತ್ಪನ್ನಗಳ ಬಳಕೆಗೆ ಸಂಬಂಧಿಸಿದಂತೆ 26 ಪ್ರಕರಣಗಳನ್ನು ದಾಖಲಿಸಿ, 2,950 ರೂ.ಗಳ ದಂಡ ವಸೂಲಿ ಮಾಡಲಾಯಿತು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link