ಸಕಲೇಶಪುರ:
ಧರ್ಮಸ್ಥಳದಿಂದ ಬೆಂಗಳೂರಿಗೆ ಹಿಂದಿರುಗುತ್ತಿದ್ದ ಕಾರಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.ಸಕಲೇಶಪುರದ ಆನೆಮಹಲ್ ಬಳಿ ಘಟನೆ ಸಂಭವಿಸಿದ್ದು, ರಾಹುಲ್, ಸಂಜಯ್ ಎಂಬ ಯುವಕರು ಮೃತಪಟ್ಟಿದ್ದಾರೆ. ಘಟನೆ ಸಂಭವಿಸುತ್ತದ್ದಂತೆ ಸ್ಥಳಕ್ಕೆ ತೆರಳಿದ ಸಕಲೇಶಪುರ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.