ಬೆಂಗಳೂರು
ನಗರ ಜಿಲ್ಲಾ ಸಾಹಿತ್ಯ ಪರಿಷತ್‍ನ ಕಟ್ಟಡ ನಿರ್ಮಾಣಕ್ಕೆ ನಿವೇಶನ ನೀಡಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿ, ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿದರು.
ಬಸವನಗುಡಿಯ ನ್ಯಾಷಿನಲ್ ಕಾಲೇಜು ಬಳಿ ಸೇರಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನ ಸದಸ್ಯರು ಸಾಹಿತಿಗಳು ಕನ್ನಡ ಸಾಹಿತ್ಯ ಪರಿಷತ್ ಭವನ ನಿರ್ಮಾಣಕ್ಕೆ ಈಗಾಗಲೇ ನಿಗದಿಯಾಗಿರುವ ನ್ಯಾಷನಲ್ ಕಾಲೇಜು ಬಳಿ ನಿವೇಶನವನ್ನು ಒದಗಿಸಿಕೊಡಬೇಕೆಂದು ಒತ್ತಾಯಿಸಿದರು
ಪರಿಷತ್ತು ಕಟ್ಟಡ ನಿರ್ಮಾಣಕ್ಕೆ ಈಗಾಗಲೇ ನಿಗದಿ ಪಡಿಸಿದ್ದ ವಾರ್ಡ್ 142ರ ಸುಂಕೇನಹಳ್ಳಿ ವ್ಯಾಪ್ತಿ ಕೆಆರ್ ರಸ್ತೆ ನ್ಯಾಷನಲ್ ಕಾಲೇಜು ಮೈದಾನಕ್ಕೆ ಹೊಂದಿಕೊಂಡಂತಿರುವ 142/47 ವಿಸ್ತಿರ್ಣಾವುಳ್ಳ ನಿವೇಶನವನ್ನು ಸಂಬಂಧಪಟ್ಟ ಶಾಸಕರು ಮತ್ತು ಅಧಿಕಾರಿಗಳ ಮೂಲಕ ಪಡೆದುಕೊಳ್ಳಲಾಗಿತ್ತು. ಮತ್ತು ಈ ಸ್ಥಳದಲ್ಲಿ ಬೆಂಗಳೂರು ನಗರ ಜಿಲ್ಲಾ ಸಾಹಿತ್ಯ ಭವನ ನಿರ್ಮಾಣ ಮಾಡಲು ಉದ್ದೇಶಿಸಿ ಸಂಬಂಧಪಟ್ಟವರಿಂದ ಸೂಚನೆಯ ಪತ್ರವನ್ನು ಸಹ ಪಡೆದುಕೊಳ್ಳಲಾಗಿತ್ತು.
ಆದರೆ ಮೆಟ್ರೋ ಕಾಮಗಾರಿಗಾಗಿ ಈ ನಿವೇಶನದ ಸ್ವಲ್ಪ ಭಾಗವನ್ನು ವಶಪಡಿಸಿಕೊಂಡ ನಂತರ ಉಳಿದಿರುವ ಜಾಗವನ್ನು ಪಡೆದುಕೊಳ್ಳಲು ಬಿಜೆಪಿ ಅಧ್ಯಕ್ಷ ಸದಾಶಿವ ಮತ್ತು ಸುಂಕೇನಹಳ್ಳಿ ವಾರ್ಡ್‍ನ ಡಿ.ಎನ್. ರಮೇಶ್ ತಡೆಒಡ್ಡುತ್ತಿದ್ದಾರೆ ಎಂದು ಕಸಾಪ ಅಧ್ಯಕ್ಷ ಮಾಯಣ್ಣ ಆರೋಪಿಸಿದರು.
ಪ್ರತಿಭಟನೆಯಲ್ಲಿ ಬೆಂಗಳೂರು ನಗರ ಜಿಲ್ಲಾ ಕಸಾಪ ಅಧ್ಯಕ್ಷ ಮಾಯಣ್ಣ, ರಾಜ್ಯ ಒಕ್ಕಲಿಗರ ಒಕ್ಕೂಟದ ಅಧ್ಯಕ್ಷ ಸಿ.ವಿ. ದೇವರಾಜ್, ಮತ್ತಿತರರು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








