ಬೆಂಗಳೂರು
ಜನವರಿ 5 ರಂದು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಕುರುಬ ಸಾಂಸ್ಕೃತಿಕ ಪರಿಷತ್ತು ವತಿಯಿಂದ ಗ್ರಂಥಗಳ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.
ಅಂದು ಸಂಜೆ 5 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಕುರುಬ ಸಾಂಸ್ಕೃತಿಕ ಪರಿಷತ್ತಿನಿಂದ 10 ಸಂಪುಟಗಳ 13 ಗ್ರಂಥಗಳನ್ನು ಲೋಕಾರ್ಪಣೆಗೊಳಿಸಲಾಗುತ್ತಿದೆ. ಕುರುಬ, ಪುರಾಣ, ಇತಿಹಾಸ, ಧರ್ಮ, ಸಾಹಿತ್ಯ, ಕಲೆ, ಕ್ರೀಡೆ, ಮಹಿಳೆ, ಆಧುನಿಕತೆ, ಚಿತ್ರಕೋಶ ಕುರಿತ ಗ್ರಂಥಗಳನ್ನು ಬಿಡುಗಡೆಗೊಳಿಸಲಾಗುತ್ತಿದೆ ಎಂದು ಪರಿಷತ್ತು ಸದಸ್ಯ ಹಾಗೂ ಕುರುಬ ಸಮಾಜದ ಮುಖಂಡ ಎಚ್.ಎಂ.ರೇವಣ್ಣ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಗ್ರಂಥಗಳನ್ನು ಲೋಕಾರ್ಪಣೆಗೊಳಿಸುತ್ತಿದ್ದು, ಸಚಿವರಾದ ಬಂಡೆಪ್ಪ ಖಾಶಂಪೂರ, ಎಂಟಿಬಿ ನಾಗರಾಜು, ಶಾಸಕರಾದ ಹೆಚ್.ವಿಶ್ವನಾಥ್, ಆರ್.ಶಂಕರ್ ಸೇರಿದಂತೆ ಕುರುಬ ಸಮಾಜದ ಹಲವು ಮುಖಂಡರು ಪ್ರಮುಖರು ಭಾಗಿಯಾಗಲಿದ್ದಾರೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








