ಬೆಂಗಳೂರು:

ಕನ್ನಡ ಚಿತ್ರರಂಗದ ಖ್ಯಾತ ನಟರು ಹಾಗೂ ನಿರ್ಮಾಪಕರಿಗೆ ಗುರುವಾರ ಬೆಳ್ಳಂಬೆಳಗ್ಗೆ ಐಟಿ ಶಾಕ್ ನೀಡಿದ್ದು ಪುನೀತ್ ರಾಜ್ ಕುಮಾರ್ ಅವರ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಅಷ್ಟೇ ಅಲ್ಲದೆ, ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರ ಮನೆ ಮೇಲೆಯೂ ಐಟಿ ದಾಳಿ ನಡೆದಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ನಿರ್ಮಾಪಕ ಜಯಣ್ಣ ಅವರ ಮನೆ ಮೇಲೆಯೂ ಐಟಿ ದಾಳಿ ನಡೆದಿದೆ ಎನ್ನಲಾಗುತ್ತಿದೆ.
ಸದಾಶಿವನಗರದಲ್ಲಿರುವ ಪುನೀತ್ ಮನೆ ಮೇಲೆ ಐಟಿ ಅದಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ರಾಕ್ ಲೈನ್ ವೆಂಕಟೇಶ್ ಅವರ ಮಹಾಲಕ್ಷ್ಮಿ ಲೇಔಟ್ ನಿವಾಸದ ಮೇಲೂ ಐಟಿ ದಾಳಿ ನಡೆದಿದ್ದು, ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.
ಕೆಜಿಎಫ್ ನಿರ್ಮಾಪಕ ವಿಜಯ್ ಕಿರಗಂದೂರು ನಿವಾಸ ಸೇರಿ ಸ್ಯಾಂಡಲ್ವುಡ್ ನಟ, ನಿರ್ಮಾಪಕರ ಮನೆ, ಕಚೇರಿ ಸೇರಿ ಸುಮಾರು 10 ಕಡೆ ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಆದಾಯ ತೆರಿಗೆ ಇಲಾಖೆಯ 8 ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








