ಬೆಂಗಳೂರು:
ಜನವರಿ ಶುರುವಾದಾಗಿನಿಂದ ರಾಜ್ಯದೆಲ್ಲೆಡೆ ಚಾಂಡಾಲ ಚಳಿಯ ಅಬ್ಬರ ಶುರುವಾಗಿದೆ, ಇನ್ನೆರಡು ದಿನಗಳಲ್ಲಿ ಚಳಿಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈಗ ಬೀಸುತ್ತಿರುವ ಶೀತಗಾಳಿಗೆ ನಗರದಲ್ಲಿನ ತಾಪಮಾನ ದಾಖಲೆ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ನಿನ್ನೆ ಬೆಂಗಳೂರಿನಲ್ಲಿ ಈ ದಶಕದಲ್ಲಿಯೇ ಅತ್ಯಂತ ಕಡಿಮೆ ತಾಪಮಾನ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು ನಗದಲ್ಲಿ ಇಂದಿನ ತಾಪಮಾನ 11 ಡಿಗ್ರಿ ಸೆಲ್ಸಿಯಸ್’ಗೆ ಇಳಿದಿದ್ದು, ಇದು ದಶಕದಲ್ಲಿಯೇ ಕನಿಷ್ಟ ತಾಪಮಾನವೆಂದು ಹೇಳಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








