ಮಂಗಳೂರು
ಮುಂಬರುವಂತಹ ಲೋಕಸಭಾ ಚುನಾವಣೆ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರುತ್ತಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಮೇಲೆ ಕಣ್ಣಿಟ್ಟಿರುವ ಮಾಜಿ ಸಚಿವ ರಮಾನಾಥ್ ರೈ ಬಿಜೆಪಿ ವೈಫಲ್ಯಗಳನ್ನು ಬಹಿರಂಗಪಡಿಸಲು ಮುಂದಾಗಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ಮುಂಬರುವ ದಿನಗಳಲ್ಲಿ ಪಾದಯಾತ್ರೆ ನಡೆಸಲು ಯೋಚಿಸಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರು- ಮಂಗಳೂರು ನಡುವೆ ಅಡ್ಡಹೊಳೆಯಿಂದ ಬಿ.ಸಿ.ರೋಡ್‌ವರೆಗಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತಕ್ಷಣ ಆರಂಭಿಸಿ ಪೂರ್ಣ ಗೊಳಿಸ ಬೇಕೆಂದು ಒತ್ತಾಯಿಸಿ ಜ.14 ರಿಂದ ಜ.16ರವರೆಗೂ ಪಾದಯಾತ್ರೆ ನಡೆಸಲು ಮುಂದಾಗಿದ್ದೇವೆ ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








