20 ಜನರಿಗೆ ಕಣ್ಣಿನ ಶಸ್ತ್ರಚಿಕಿತ್ಸೆ.

ಹೊಸಪೇಟೆ :

        ನಗರದ ಸಂಡೂರು ರಸ್ತೆಯ ಅಶ್ವಿನಿ ಕಣ್ಣಿನ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಕಣ್ಣಿನ ತಪಾಸಣಾ ಶಿಬಿರದಲ್ಲಿ 20ಕ್ಕೂ ಹೆಚ್ಚು ದೃಷ್ಠಿ ದೋಷಿತರಿಗೆ ಶುಕ್ರವಾರ ಶಸ್ತ್ರಚಿಕಿತ್ಸೆ ನೆರವೇರಿಸಲಾಯಿತು.

          ಹಗರಿಬೊಮ್ಮನಹಳ್ಳಿ ತಾಲೂಕಿನ ನಂದಿಪುರ ದೊಡ್ಡಬಸವೇಶ್ವರ ದೇವಸ್ಥಾನದಲ್ಲಿ ನಡೆದ ಲಕ್ಷ ದೀಪೋತ್ಸವದ ಅಂಗವಾಗಿ ನಂದಿಪುರ ಮಠದ ಮಹೇಶ್ವರ ಸ್ವಾಮೀಜಿಗಳು 20ಕ್ಕೂ ಹೆಚ್ಚು ದೃಷ್ಠಿ ದೋಷಿತರನ್ನು ಕರೆ ತಂದು ಇಲ್ಲಿನ ಅಶ್ವಿನಿ ಕಣ್ಣಿನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಕೊಡಿಸುವಲ್ಲಿ ನೆರವಾದರು.

        ಅಶ್ವಿನಿ ಆಸ್ಪತ್ರೆಯ ನೇತ್ರ ತಜ್ಞರಾದ ಡಾ.ಶ್ರೀನಿವಾಸ ದೇಶಪಾಂಡೆ ಹಾಗು ಡಾ.ದಿಶಾ ಅವರಿಂದ 2 ದಿನಗಳ ಕಾಲ ಶಸ್ತ್ರಚಿಕಿತ್ಸೆ ನಡೆಯಿತು.

       ಚಿಕಿತ್ಸೆ ಪಡೆದು ಇಂದು ಮನೆಗೆ ತೆರಳಿದ ಪ್ರತಿಯೊಬ್ಬರಿಗೂ ಒಂದೊಂದು ಸಸಿಯನ್ನು ನೀಡಿದ ಶ್ರೀಗಳು, ಈ ಸಸಿಗಳನ್ನು ನೆಟ್ಟು, ನಿಮ್ಮ ಕಣ್ಣುಗಳಂತೆ ಅವುಗಳನ್ನು ಕಾಪಾಡಬೇಕು ಎಂದು ತಿಳಿಸಿದರು.ಈ ಸಂಧರ್ಭದಲ್ಲಿ ಕೊಟ್ಟೂರು ಶಂಕರಮೂರ್ತಿ ಸ್ವಾಮೀಜಿ, ಬೆಣ್ಣೆಹಳ್ಳಿ ಪಂಚಾಕ್ಷರಿ ಶಿವಾಚಾರ್ಯ ಸ್ವಾಮೀಜಿಗಳು ಉಪಸ್ಥಿತರಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link