ತಿರುವನಂತಪುರಂ
ಶಬರಿಮಲೆ ವಿವಾದಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಹಿಂಸಾಚಾರದ ಬೆನ್ನಲ್ಲೆ ಕೇರಳದ ಬಿಜೆಪಿ ಹಾಗೂ ಸಿಪಿಎಂ ಮುಖಂಡರ ಮನೆ ಮೇಲೆ ಕಚ್ಚಾ ಬಾಂಬ್ ದಾಳಿ ಶುರುವಾಗಿದೆ ಇತ್ತೀಚೆಗೆ ತಲ್ಲಸರಿ ಕ್ಷೇತ್ರದ ಸಿಪಿಎಂ ಶಾಸಕ ಎಎನ್ ಶಮ್‌ಶೇರ್ ಹಾಗೂ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಪಿ.ಸಾಯಿ ಅವರುಗಳ ಮನೆಯ ಮೇಲೆ ಶುಕ್ರವಾರ ರಾತ್ರಿ ಕಚ್ಚಾ ಬಾಂಬ್ ದಾಳಿ ನಡೆದಿದೆ. ತಡರಾತ್ರಿಯಲ್ಲಿ ಬಿಜೆಪಿ ರಾಜ್ಯಸಭಾ ಸದಸ್ಯ ವಿ.ಮುರಳೀಧರನ್ ಅವರ ಮನೆಯ ಮೇಲೆ ದುಷ್ಕರ್ಮಿಗಳು ಕಚ್ಚಾ ಬಾಂಬ್ ದಾಳಿ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ .
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ