ಶಿವಮೊಗ್ಗ
ಸಹ್ಯಾದ್ರಿಯ ಮಡಿಲಲ್ಲಿ ಆರೋಗ್ಯದ ಬೀಡಾದ ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನಕಾಯಿಲೆ ಕಾಣಿಸಿಕೊಂಡ ನಂತರ 18ರ ಯುವತಿಯೊಬ್ಬಳು ಈ ಕಾಯಿಲೆಯಿಂದ ಸಾವನ್ನಪ್ಪಿದ್ದಾಳೆ.
ಮಂಗನಕಾಯಿಲೆ ಸಾಗರದಲ್ಲಿ 6 ಜನರನ್ನು ಬಲಿ ಪಡೆದಿದೆ, ಈ ಘಟನೆಗಳಿಂದ ಆತಂಕದ ವಾತಾವರಣ ನಿರ್ಮಾಣವಾಗಿದ್ದು. ಸಾಗರ ತಾಲೂಕಿನ ಅರಳಗೋಡು ಗ್ರಾಮದ ನಿವಾಸಿ ಶ್ವೇತಾ (18) ಎಂಬ ಯುವತಿ ಮಂಗನಕಾಯಿಲೆಗೆ ತುತ್ತಾಗಿದ್ದರು ಅವರನ್ನು ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಸೇರಿಸಲಾಗಿತ್ತಾದರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ