ಬಳ್ಳಾರಿ:
ಚುನಾವಣಾ ಪ್ರಚಾರದಲ್ಲಿ ಕುಮಾರಣ್ಣ ನೀಡಿದ ವಾಗ್ದಾನಗಳನ್ನು ಗಾಳಿಗೆ ತೂರಿ ಸರ್ಕಾರ ನಡೆಸುತ್ತಿದ್ದಾರೆ ಮುಖ್ಯಮಂತ್ರಿ ಯಾಗುವುದಕ್ಕೂ ಮುನ್ನ ಅಕ್ರಮ ಗಣಿಗಾರಿಕೆ ನಿಲ್ಲಿಸುತ್ತೇನೆ ಎಂಧು ಹೇಳಿದ ಅವರು ಇದೀಗ ಅಕ್ರಮ ಗಣಿಗಾರಿಕೆಗೆ ಅವರೇ ಪರೋಕ್ಷವಾಗಿ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಿಎಂ ಕುಮಾರಸ್ವಾಮಿ ವಿರುದ್ಧ ಆರೋಪಿಸಿದ್ದಾರೆ .
ಅಕ್ಷರ ಜಾತ್ರೆಯಲ್ಲಿ ಭಾಗವಹಿಸಲು ಇಂದು ಧಾರವಾಡಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಗಡಿಭಾಗದಲ್ಲಿ ಅಕ್ರಮ ಗಣಿಗಾರಿಕೆಯನ್ನು ಯಾರೇ ಮಾಡಿದರೂ ನಾವು ಅದನ್ನು ತಡದೇ ತಡೆಯುತ್ತೇವೆ ಎಂದಿದ್ದ ಮುಖ್ಯಮಂತ್ರಿಗಳು ಹೇಳಿದ್ದರು. ಆದರೆ ಅವರೇ ಪರೋಕ್ಷ ಬೆಂಬಲ ನೀಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ