ಕೋಲ್ಕತ:
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ಮಂತ್ರಿ ಸ್ಥಾನಕ್ಕೆ ಉತ್ತಮ ಆಯ್ಕೆ ಎಂದು ಹೇಳುವ ಮೂಲಕ ಬಿಜೆಪಿ ನಾಯಕರು ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ.
ಪ್ರಧಾನ ಮಂತ್ರಿ ಆಯ್ಕೆಯನ್ನು ಪಶ್ಚಿಮ ಬಂಗಾಳದಿಂದ ಮಾಡುವುದಾದರೆ ಮಮತಾ ಅವರಿಗೆ ಉತ್ತಮ ಅವಕಾಶವಿದೆ. ಅವರು ಮುಂದಿನ ಪ್ರಧಾನಿ ಆಗುವ ಕನಸು ಕಾಣುತ್ತಿದ್ದಾರೆ. ಆದ್ದರಿಂದ ಅವರಿಗೆ ಒಳ್ಳೆಯದಾಗಲಿ. ಅವರು ಉತ್ತಮ ಆರೋಗ್ಯವನ್ನು ಹೊಂದಿರಬೇಕು. ಹೀಗಾಗಿ ಅವರಿಗೆ ಶುಭಕೋರುತ್ತೇನೆ. ಆದರೆ, ನರೇಂದ್ರ ಮೋದಿ ಅವರು ಮುಂದಿನ ಪ್ರಧಾನಿ ಆಗಲಿದ್ದಾರೆ ಎಂಬುದು ವಾಸ್ತವದ ಸಂಗತಿ ಎಂದು ದಿಲೀಪ್ ಶನಿವಾರ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ