14 ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿಯನ್ನು ಪ್ರಕಟಿಸಿದ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು

       ಸಾಕಷ್ಟು ವಿಳಂಬದ ನಂತರ ಕೊನೆಗೂ ರಾಜ್ಯ ಸರ್ಕಾರ ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿಯನ್ನು ಬಿಡುಗಡೆ ಮಾಡಿದೆ. 21 ನಿಗಮ ಮಂಡಳಿಗಳ ಪೈಕಿ 14 ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿಯನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಕಟಿಸಿದ್ದಾರೆ. ಆದರೆ, ಬಿಡಿಎ, ರಾಜ್ಯ ವಿದ್ಯುತ್ ಪ್ರಸಾರ ನಿಗಮ ಸೇರಿದಂತೆ 7 ಪ್ರಮುಖ ನಿಗಮಗಳ ಅಧ್ಯಕ್ಷ ಸ್ಥಾನ ಇನ್ನೂ ಖಾಲಿ ಇದೆ. ನಿಗಮದ ಅಧ್ಯಕ್ಷರಿಗೆ ಸಂಪುಟ ದರ್ಜೆಯ ಸ್ಥಾನಮಾನ ದೊರೆಯಲಿದೆ.

         ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ (ಭೂಸೇನೆ) ನಿಗಮದ(ಕೆಆರ್ ಐಡಿಎಲ್)ನ ಅಧ್ಯಕ್ಷರಾಗಿ ಬಿ.ಕೆ.ಸಂಗಮೇಶ್ವರ್, ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷರಾಗಿ ಆರ್. ನರೇಂದ್ರ, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಬಿ.ನಾರಾಯಣ್ ರಾವ್, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಡಾ. ಉಮೇಶ್ ಜಿ.ಜಾಧವ್, ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ಅಧ್ಯಕ್ಷರಾಗಿ ಟಿ.ರಘುಮೂರ್ತಿ, ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರಾಗಿ ಯಶವಂತರಾಯಗೌಡ ವಿ.ಪಾಟೀಲ್, ರಾಜ್ಯ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷರಾಗಿ ಬಿ.ಎ.ಬಸವರಾಜು, ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ (ಕಿಯೋನಿಕ್ಸ್) ಅಧ್ಯಕ್ಷರಾಗಿ ಬಿ.ಶಿವಣ್ಣ, ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಎಸ್.ಎನ್.ನಾರಾಯಣಸ್ವಾಮಿ, ರಾಜ್ಯ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಮುನಿರತ್ನ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿ ಅರಬೈಲ್ ಶಿವರಾಮ ಹೆಬ್ಬಾರ್, ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸುರೇಶ್ ಬಿ.ಎಸ್, ರಾಜ್ಯ ಖನಿಜ ನಿಗಮದ ಅಧ್ಯಕ್ಷರಾಗಿ ಲಕ್ಷ್ಮಿ ಆರ್. ಹೆಬ್ಬಾಳ್ಕರ್, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಟಿ.ಡಿ.ರಾಜೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ.

           ಸಂಸದೀಯ ಕಾರ್ಯದರ್ಶಿಗಳಾಗಿ ಶಾಸಕರಾದ ಕೆ.ಅಬ್ದುಲ್ ಜಬ್ಬಾರ್, ಡಾ.ಅಂಜಲಿ ಹೇಮಂತ್ ನಿಂಬಾಳ್ಕರ್, ಐವಾನ್ ಡಿಸೋಜಾ, ಕೌಜಲಗಿ ಮಹಾಂತೇಶ್ ಶಿವಾನಂದ್, ರೂಪಾಕಲಾ ಎಂ.ಶಶಿಧರ್, ಕೆ.ಗೋವಿಂದರಾಜು, ಕೆ.ರಾಘವೇಂದ್ರ ಬಸವರಾಜ್ ಹಿಟ್ನಾಳ್, ಡಿ.ಎಸ್.ಹೂಲಗೇರಿ ಆಯ್ಕೆಯಾಗಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link