ಚಿತ್ರದುರ್ಗ
ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಕಾರಣ ಬಿಜೆಪಿ ಹೊಸದುರ್ಗ ಬಂದ್ಗೆ ಕರೆ ನೀಡಿದೆ.ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಂದ ಬಂದ್ ಗೆ ಬೆಂಬಲವನ್ನು ಸೂಚಿಸಿದ್ದು, ಬೆಳಗ್ಗೆಯಿಂದ ಸಂಜೆ 6 ವರೆಗೆ ಬಂದ್ ಗೆ ಕರೆ ನೀಡಲಾಗಿದೆ.ಅಕ್ರಮ ಮರಳು ದಂಧೆ ವಿರುದ್ಧ ಇತ್ತೀಚೆಗೆ ದೊಡ್ಡ ಸಮರವನ್ನೇ ಸಾರಿದ್ದ ಹೊಸದುರ್ಗದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಇದೇ ವಿಚಾರವಾಗಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ.
ಶಾಸಕ ಗೂಳಿಹಟ್ಟಿ ಶೇಖರ್ ಅವರನ್ನು ನಿನ್ನೆ ಹೊಸದುರ್ಗ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಆದರೆ ಶಾಸಕರ ಕಿವಿ, ಮೂಗು, ಬಾಯಿಯ ಒಳಗೆ ಪೆಟ್ರೋಲ್ ಹರಿದು ಹೋಗಿದೆ. ಮುಂಜಾಗೃತೆ ಕ್ರಮವಾಗಿ ಹೆಚ್ಚಿನ ಚಿಕಿತ್ಸೆಗಾಗಿ ಆ್ಯಂಬುಲೆನ್ಸ್ ಮೂಲಕ ಶಿವಮೊಗ್ಗಕ್ಕೆ ರವಾನಿಸಲಾಗಿದೆ.
ಕೆಲವು ದಿನಗಳಿಂದ ಮರಳು ದಂಧೆಯ ವಿಚಾರದಲ್ಲಿ ಪೊಲೀಸರು ಮತ್ತು ಜಿಲ್ಲಾಡಳಿತ ವಿರುದ್ಧ ನಿರಂತರ ಹೋರಾಟ ಮಾಡುತ್ತಾ ಬಂದಿದ್ದಾರೆ. ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕುವ ಹೆಸರಿನಲ್ಲಿ ಅಮಾಯಕ ಜನರ ಮೇಲೆ ಕೇಸ್ ದಾಖಲಾಗುತ್ತಿದೆ ಎಂದು ಬಿಜೆಪಿ ಶಾಸಕರ ಪ್ರಮುಖ ಆಕ್ಷೇಪ ವ್ಯಕ್ತಪಡಿಸಿದ್ದರು ಎಂದು ತಿಳಿದು ಬಂದಿದೆ .
ಗೂಳಿಹಟ್ಟಿ ಶೇಖರ್ ಪ್ರತಿಕ್ರಿಯೆ ನೀಡಿದ್ದು,’ಹೊಸದುರ್ಗ ತಾಲೂಕಿನಲ್ಲಿ ಮರಳಿನ ಸಮಸ್ಯೆ ಇದೆ. ಅನೇಕ ಬಾರಿ ಸಚಿವರು, ಸಿಎಂಗೆ ವಿಷಯ ತಿಳಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ರೈತರು, ಬಡವರು, ಮರಳು ಸಿಗದೇ ಸಂಕಷ್ಟ ಅನುಭವಿಸುತ್ತಿದ್ದಾರೆ. ಕಳೆದ 5 ವರ್ಷಗಳಲ್ಲಿ ಈ ಸಮಸ್ಯೆ ಇರಲಿಲ್ಲ. ನಾನು ಗೆದ್ದ ಮೇಲೆ ಈ ಸಮಸ್ಯೆ ಆಗಿದೆ. ಬಿಜೆಪಿ ಶಾಸಕರು ಎಂಬ ಕಾರಣಕ್ಕೆ ಈ ರೀತಿ ಮಾಡುತ್ತಿದ್ದಾರೆ. ವಿಧಿ ಇಲ್ಲದೇ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದೆ ಎಂದು ತಿಳಿಸಿದ್ದಾರೆ .
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ