ಬೆಂಗಳೂರು
ವಿಧಾನಸೌಧದಲ್ಲಿ ಅಕ್ರಮವಾಗಿ ಹಣ ಸಾಗಾಣಿಕೆ ಪ್ರಕರಣದಲ್ಲಿ ಕೆಲವು ಲೋಪಗಳಾಗಿದ್ದು, ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 53 ನೇ ಪುಣ್ಯತಿಥಿ ಪ್ರಯುಕ್ತ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.
ಮಾಧ್ಯಮಗಳಿಗೆ ನಿರ್ಬಂಧ ಹೇರಲು ಸಚಿವ ಪುಟ್ಟರಂಗ ಶೆಟ್ಟಿ ನ್ಯಾಯಾಲಯದ ಮೊರೆ ಹೋಗಿದ್ದಾರೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಸಚಿವ ಪುಟ್ಟರಂಗಶೆಟ್ಟಿ ನ್ಯಾಯಾಲಯದ ಮೊರೆ ಹೋಗಿರುವುದು ಅದು ಅವರ ವೈಯಕ್ತಿಕ ವಿಚಾರ.
ಇದರಿಂದ ಮಾಧ್ಯಮಗಳ ಸ್ವಾತಂತ್ರ್ಯಹರಣವಾಗುತ್ತದೆ ಎಂದು ತಾವು ಭಾವಿಸುವಿದಿಲ್ಲ ಎಂದರು.ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ನೇಮಕಾತಿ ವಿಚಾರವಾಗಿ ಮಾತನಾಡಿದ ಅವರು, ಸುಧಾಕರ್ ಅವರ ನೇಮಕಕ್ಕೆ ತಾಂತ್ರಿಕ ತೊಂದರೆಗಳಿದ್ದು, ಆ ಬಗ್ಗೆ ಬಹಿರಂಗವಾಗಿ ಚರ್ಚಿಸಿ ಮುಖ್ಯಮಂತ್ರಿ ಹುದ್ದೆಯ ಘನತೆಯನ್ನು ಕುಗ್ಗಿಸಲು ಇಚ್ಛಿಸುವುದಿಲ್ಲ, ಎಲ್ಲಿ ಯಾವಾಗ ಏನು ನಿರ್ಧಾರ ತೆಗೆದುಕೊಳ್ಳಬೇಕು ಎಂಬುದನ್ನು ಯೋಚಿಸಿ ಸಂದರ್ಭ ಬಂದಾಗ ತೀರ್ಮಾನಿಸುವುದಾಗಿ ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ