ಬೆಂಗಳೂರು
ಆಂಧ್ರ ಸಾರಿಗೆ ಬಸ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿ 15 ಮಂದಿ ಗಾಯಗೊಂಡಿರುವ ದುರ್ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಮುಂಜಾನೆ ನಡೆದಿದೆ.
ಚಾಲಕ ಸೇರಿ ಪ್ರಯಾಣಿಕ ಹೇಮಂತ್ ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಹೆಸರು ವಿಳಾಸ ಸದ್ಯಕ್ಕೆ ತಿಳಿದುಬಂದಿಲ್ಲ 15 ಕ್ಕೂ ಹೆಚ್ಚು ಮಂದಿಗೆ ತೀವ್ರ ಗಾಯಾಗಳಾಗಿವೆ. ಆಂಧ್ರ ಸಾರಿಗೆ ಬಸ್ ಚಾಲಕ ಸೇರಿ ಪ್ರಯಾಣಿಕ ಹೇಮಂತ್ ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಂತಾಜನಕ ಸ್ಥಿತಿಯಲ್ಲಿರುವರನ್ನು ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ ಮಾಡಲಾಗಿದೆ.
ಹೆದ್ದಾರಿಯಲ್ಲಿ ದಟ್ಟ ಮಂಜು ಕವಿದಿದ್ದರಿಂದ ಲಾರಿಗೆ ಹಿಂಬದಿಯಿಂದ ಸಾರಿಗೆ ಬಸ್ ಗುದ್ದಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿದೇಶಿ ಕರೆನ್ಸಿ ಮಾರಾಟ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎ)ದಲ್ಲಿ ಅಕ್ರಮವಾಗಿ ವಿದೇಶಿ ಕರೆನ್ಸಿ ಮಾರಾಟ ಮಾಡುತ್ತಿದ್ದ ಇಂಡೋನೇಷಿಯಾ ಪ್ರಜೆಯನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿ 56 ವರ್ಷದ ಇಂಡೋನೇಷ್ಯಾ ಮೂಲದ ವ್ಯಕ್ತಿಯಾಗಿದ್ದು ಆತನಿಂದ ಸುಮಾರು 2.1 ಕೋಟಿ ರೂ ಮೌಲ್ಯದ ವಿದೇಶಿ ಕರೇನ್ಸಿಯನ್ನು ವಶಪಡಿಸಿಕೊಳ್ಳಲಾಗಿದೆ.
ಅಮೆರಿಕನ್ ಡಾಲರ್ ಸೇರಿದಂತೆ ವಿವಿಧ ದೇಶಗಳ 2.1ಕೋಟಿ ರೂಪಾಯಿ ಮೌಲ್ಯದ ಕರೆನ್ಸಿ ಹೊತ್ತು ಬ್ಯಾಂಕಾಕ್‍ಗೆ ಹಾರಲು ಯತ್ನಿಸುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಏಷ್ಯಾ ಫ್ಲೈಟ್ ಎಫ್‍ಡಿ 138 ವಿಮಾನದಲ್ಲಿ ಟಿಕೆಟ್ ಬುಕ್ ಮಾಡಿದ್ದ ಆರೋಪಿ, ವಿಮಾನಕ್ಕೆ ಬೋರ್ಡಿಂಗ್ ಆಗುವ ವೇಳೆ ಭದ್ರತಾ ಸಿಬ್ಬಂದಿಗಳು ಪರಿಶೀಲನೆ ನಡೆಸಿದಾಗ ಅಪಾರ ಪ್ರಮಾಣದ ವಿದೇಶಿ ಕರೆನ್ಸಿ ಪತ್ತೆಯಾಗಿದೆ.ಅಕ್ರಮವಾಗಿ ಸಾಗಿಸುತ್ತಿದ್ದ ಕರೆನ್ಸಿಗಳನ್ನು ವಶಕ್ಕೆ ಪಡೆದಿರುವ ಕಸ್ಟಮ್ ಅಧಿಕಾರಿಗಳು, ತನಿಖೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
