ಜ.21 ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಬಾಗ ಪ್ರತಿಭಟನೆ- ಚಿರಂಜೀವಿ

ಜಗಳೂರು:

            ಹಲವು ವರ್ಷಗಳಿಂದ ಸರಕಾರಿ ಗೋಮಾಳದಲ್ಲಿ ಉಳುಮೆ ಮಾಡುವ ರೈತರಿಗೆ ಸಾಗುವಳಿ ಪತ್ರ ನೀಡುವಲ್ಲಿ ಅಧಿಕಾರಿಗಳು ವಿಳಂಭ ನೀತಿಯನ್ನು ಅನುಸರಿಸುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದಲ್ಲಿ ಜ. 21 ರಂದು ಸೋಮವಾರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಹುಚ್ಚವ್ವನಹಳ್ಳಿ ಮಂಜುನಾಥ ಬಣದ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿರಂಜೀವಿ ತಿಳಿಸಿದರು.

          ಪಟ್ಟಣದ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಜ. 21 ರಂದು ಸೋಮವಾರ ಬೆಳಿಗ್ಗೆ 11 ಗಂಟೆಗೆ ದಾವಣಗೆರೆಯ ಜಯದೇವ ವೃತ್ತದಿಂದ ಜಿಲ್ಲಾಧಿಕಾರಿಗಳ ಕಛೇರಿಯವರೆಗೂ ತೆರಳಿ ಬೃಹತ್ ಪ್ರತಿಭಟನೆಯನ್ನು ನಡೆಸಲಾಗುವುದು. ತಾಲೂಕಿನಲ್ಲಿ ಭೂ ರಹಿತರು ಸರಕಾರಿ ಗೋಮಾಳ, ಸೇಂದಿ ವನ, ಅರಣ್ಯ ಭೂಮಿಯಲ್ಲಿ ಅನೇಕ ವರ್ಷಗಳಿಂದ ಸಾಗುವಳಿ ಮಾಡುತ್ತಾ ಬಂದಿದ್ದು ಕೆಲವೇ ಜನರಿಗೆ ಮಾತ್ರ ಸಾಗುವಳಿ ಪತ್ರಗಳನ್ನು ನೀಡಿ ಇನ್ನು ಬಹುತೇಕ ಉಳುಮೆದಾರರಿಗೆ ಸಾಗುವಳಿ ಪತ್ರಗಳನ್ನು ನೀಡದೇ ಅಲೆದಾಡಿಸುತ್ತಿದ್ದು, ರೈತರು ತುಂಬಾ ಸಂಕಷಕ್ಕೀಡಾಗುವಂತಾಗಿದೆ.

        ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೂ ಸಹ ಹಕ್ಕುಪತ್ರ ವಿತರಣೆ ಮಾಡಬೇಕೆಂದು ಆಗ್ರಹಿಸಲಾಗುವುದು ಎಂದರು. ವೇಳೆ ರೈತ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಕಸವನಹಳ್ಳಿ ನೀಲಮ್ಮನವರು ಜ. 14 ರಂದು ಸೋಮವಾರ ಬೆಳಿಗ್ಗೆ ಅಕಾಲಿಕ ಮರಣ ಹೊಂದಿದ್ದರಿಂದ ಒಂದು ನಿಮಿಷಗಳ ಕಾಲ ಸಂತಾಪ ಸೂಚಿಸಿದರು.ಈ ಸಂದರ್ಭದಲ್ಲಿ ರೈತ ಸಂಘದ ಕಸಬಾ ಹೋಬಳಿ ಅಧ್ಯಕ್ಷ ಲೋಕೇಶ್, ತಾಲೂಕು ಪ್ರಧಾನ ಕಾರ್ಯದರ್ಶಿ ರಾಜು, ಸಿಎಂ ಹೊಳೆ ಗ್ರಾಮ ಘಟಕದ ಪ್ರಧಾನ ಕಾರ್ಯದರ್ಶಿ ಡಿ.ತಿಪ್ಪೇಸ್ವಾಮಿ, ಕಸವನಹಳ್ಳಿ ಹುಸೇನ್ ಹಾಜರಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link