ಚಿತ್ರದುರ್ಗ:
ಸದ್ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ದುರ್ಗುಣಗಳನ್ನು ಹೊರಹಾಕಿದಾಗ ಮಾತ್ರ ಜೀವನದಲ್ಲಿ ಯಶಸ್ಸು ಕಂಡುಕೊಳ್ಳಬಹುದು ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಶಿವರಶ್ಮಿ ಅಕ್ಕನವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ರೈಲ್ವೆ ಸ್ಟೇಷನ್ ಸಮೀಪವಿರುವ ನೆಹರು ಐ.ಟಿ.ಐ.ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ಕುರಿತು ಹಮ್ಮಿಕೊಂಡಿದ್ದ ಚಿಂತನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಆತ್ಮವಿಶ್ವಾಸ, ಸಹ ವಿದ್ಯಾರ್ಥಿಗಳೊಂದಿಗೆ ಶುಭಭಾವನೆ, ಶುಭ ಕಾಮನೆ, ಎಂತಹ ಕಠಿಣ ಪರಿಸ್ಥಿತಿ ಎದುರಾದರೂ ಹೆದರದೆ ದೃಢತೆಯಿಂದಿರುವುದು, ದುಶ್ಚಟಗಳಿಗೆ ಒಳಗಾಗದೆ ಶರೀರದ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಇವೆಲ್ಲಾ ಸಾಧನೆ ಮಾಡಬೇಕಾದರೆ ವಿದ್ಯಾರ್ಥಿಗಳು ಧ್ಯಾನಕ್ಕೆ ಮೊರೆ ಹೋಗಬೇಕು ಎಂದು ತಿಳಿಸಿದರು.
ಡಿಜಿಟಲ್ ವಲ್ರ್ಡ್‍ನ ದಾದಾಪೀರ್ ಮಾತನಾಡಿ ಆತ್ಮವಿಶ್ವಾಸವಿದ್ದಾಗ ಮಾತ್ರ ಜೀವನದಲ್ಲಿ ಗುರಿಮುಟ್ಟಬಹುದು. ವಿದ್ಯೆ ಸಾಧಕನ ಸ್ವತ್ತೆ ಹೊರತು ಸೋಮಾರಿಯ ಸ್ವತ್ತಲ್ಲ. ಹಾಗಾಗಿ ಶಿಕ್ಷಣದ ಕಡೆ ಹೆಚ್ಚಿನ ಒತ್ತು ಕೊಡಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಡು ಬಡತನ ಕುಟುಂಬದಲ್ಲಿ ಜನಿಸಿದ ಅಬ್ದುಲ್‍ಕಲಾಂ ಕ್ಷಿಪಣಿ ತಜ್ಞರಾಗಿ ದೇಶದ ಅತ್ಯುನ್ನತ ರಾಷ್ಟ್ರಪತಿ ಹುದ್ದೆಯನ್ನು ಅಲಂಕರಿಸಿದರು. ಚಿಕ್ಕ ವಯಸ್ಸಿನಲ್ಲಿಯೇ ಅನೇಕ ನೋವು, ಅವಮಾನ, ನಿಂದನೆ, ಕಷ್ಟಗಳನ್ನು ಸಹಿಸಿಕೊಂಡು ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನವನ್ನು ರಚಿಸಿ ದೇಶಕ್ಕೆ ಕೊಡುಗೆಯಾಗಿ ನೀಡಿದರು. ಮನಸ್ಸನ್ನು ದುಶ್ಚಟಗಳ ಕಡೆಗೆ ಹರಿಯಲು ಬಿಡದೆ ಏಕಾಗ್ರತೆಯಿಂದ ಶಿಕ್ಷಣ ಪಡೆದಾಗ ಮಾತ್ರ ಜೀವನದಲ್ಲಿ ಏನಾದರೂ ಸಾಧನೆ ಮಾಡಬಹುದು ಎಂದು ಹೇಳಿದರು.
ವಿನಾಯಕ ವಿದ್ಯಾಸಂಸ್ಥೆ ಅಧ್ಯಕ್ಷರಾದ ಬಷೀರ್ ಅಹಮದ್ ಅಧ್ಯಕ್ಷತೆ ವಹಿಸಿದ್ದರು.ಷಾಹಇಮಾಂ ಹಜರತ್ ಆದಂರಾಜಾ, ವಿದ್ಯಾಸಂಸ್ಥೆ ಕಾರ್ಯದರ್ಶಿ ಮಹಮದ್ ಮೊಹಸೀನ್ ವೇದಿಕೆಯಲ್ಲಿದ್ದರು.ಕುಬೇರಪ್ಪ ನಿರೂಪಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ