ಬೆಂಗಳೂರು :
ಒಂದು ರಾಷ್ಟ್ರೀಯ ಪಕ್ಷವಾಗಿರುವ ಬಿಜೆಪಿ ಆಪರೇಷನ್ ಕಮಲ ಹೆಸರಿನಲ್ಲಿ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ಈ ವಿಚಾರದಲ್ಲಿ ಬಿಜೆಪಿಗೆ ಖಂಡಿತ ಮುಖಭಂಗವಾಗುತ್ತದೆ ಎಂದು ಕಾಂಗ್ರೆಸ್ ನ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ.
ರಾಜ್ಯದಲ್ಲಿ ಕಳೆದ ಎರಡು ಮೂರು ದಿನಗಳಲ್ಲಿ ನಡೆಯುತ್ತಿರುವ ಆಪರೇಷನ್ ಕಮಲ ಕಾರ್ಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರವನ್ನು ಉರುಳಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ರಯತ್ನಿಸುತ್ತಿರುವ ಬಿಜೆಪಿ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ನಮ್ಮ ಮೈತ್ರಿ ಸರ್ಕಾರ ಸಂಘಟಿತವಾಗಿದ್ದು, ಇನ್ನೂ ಬಲಿಷ್ಠವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ