ವಿದ್ಯಾರ್ಥಿಗಳು ಓದುವ ಸಮಯದಲ್ಲಿ ಮೊಬೈಲ್‍ಗಳಿಂದ ದೂರವಿರಬೇಕು

ಹಿರಿಯೂರು :

      ವಿದ್ಯಾರ್ಥಿಗಳು ಓದುವ ಸಮಯದಲ್ಲಿ ಮೊಬೈಲ್ ವ್ಯಾಟ್ಸ್ಯಾಪ್‍ಗಳಿಂದ ದೂರವಿರಬೇಕು ಇದರಿಂದ ಅಮೂಲ್ಯವಾದ ಸಮಯ ವ್ಯರ್ಥವಾಗುತ್ತದೆ, ಬದಲಾಗಿ ಶಿಕ್ಷಣ, ಸಾಂಸ್ಕøತಿಕ, ಸಾಹಿತ್ಯ, ಸಂಗೀತ, ಕ್ರೀಡೆಗಳಲ್ಲಿ ತೊಡಗಿಸಿಕೊಂಡು ವಿದ್ಯಾರ್ಥಿ ಜೀವನವನ್ನು ಸಾರ್ಥಕಪಡಿಸಿಕೊಳ್ಳುಬೇಕು ಎಂಬುದಾಗಿ ಪೋಲೀಸ್ ಇಲಾಖೆಯ ಆರಕ್ಷಕ ನಿರೀಕ್ಷಕರಾದ ಗುರುರಾಜ್ ತಿಳಿಸಿದರು.

       ತಾಲೂಕಿನ ಜೆ.ಜೆ.ಹಳ್ಳಿ ಗ್ರಾಮದಲ್ಲಿರುವ ನವಚೇತನ ವಿದ್ಯಾಸಂಸ್ಥೆ ಶಾಲಾವಾರ್ಷಿಕೋತ್ಸವ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

       ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷರಾದ ಎನ್.ಶ್ರೀನಿವಾಸ್ ಮಾತನಾಡಿ, ಪೋಷಕರು ಶಿಕ್ಷಣ ಸಂಸ್ಥೆಗಳ ಮೇಲೆ ನಂಬಿಕೆ ವಿಶ್ವಾಸವಿಟ್ಟು ಮಕ್ಕಳನ್ನು ಶಾಲೆಗೆ ಸೇರಿಸುತ್ತಾರೆ ಅದಕ್ಕೆ ಧÀಕ್ಕೆ ಬಾರದ ರೀತಿಯಲ್ಲಿ ಆಡಳಿತ ಮಂಡಳಿ ಮತ್ತು ಶಿಕ್ಷಕರು ನಡೆದುಕೊಳ್ಳಬೇಕು, ವಿಶೇಷವಾಗಿ ಶಿಕ್ಷಕರು ತಮ್ಮ ಜವಬ್ದಾರಿಯನ್ನು ಅರಿತು ಕೆಲಸ ಮಾಡಿ ಸಂಸ್ಥೆಯ ಅಭಿವೃದ್ದಿಗೆ ಶ್ರಮಿಸಬೇಕಾಗಿದೆ ಎಂದು ಹೇಳಿದರು.

       ಕಾರ್ಯಕ್ರಮದಲ್ಲಿ ಗ್ರಾಮಪಂಚಾಯಿತಿ ಅಧ್ಯಕ್ಷರಾದ ವಸಂತಲಕ್ಷ್ಮಿ,ಸಿ.ಆರ್.ಪಿ ಗುರುಮೂರ್ತಿ, ವಿದ್ಯಾಸಂಸ್ಥೆ ಕಾರ್ಯದರ್ಶಿ ಟಿ.ತಿಪ್ಪೇಸ್ವಾಮಿ, ಕಾಂಚನ, ಜ್ಞಾನೇಶ್ವರಿ, ವಿಮಲ, ನಾಗರತ್ನ, ಉಪಸ್ಥಿತರಿದ್ದರು, ಕಾರ್ಯಕ್ರಮದ ನಂತರ ಶಾಲಾಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ ಮೂಡಿಬಂದವು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link