ಬಿಜೆಪಿ ಶಾಸಕರನ್ನು ಸೆಳೆಯುತ್ತಿರುವುದು ಕಾಂಗ್ರೆಸ್ ಹಾಗೂ ಜೆಡಿಎಸ್!!

ಬೆಂಗಳೂರು:

      ನಮ್ಮ ಶಾಸಕರನ್ನು ಸೆಳೆಯುವ ಕೆಲಸ ಮಾಡುತ್ತಿರುವುದು ಕಾಂಗ್ರೆಸ್ ಹಾಗೂ ಜೆಡಿಎಸ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. 

 

       ಆಪರೇಷನ್​ ಕಮಲ ಯಶಸ್ವಿಯಾಗದ ಕುರಿತು ಪ್ರಶ್ನೆಗೆ ಉತ್ತರಿಸಿರುವ ಯಡಿಯೂರಪ್ಪ, ನಾವು ಯಾವುದೇ ಆಪರೇಷನ್​ ಕಮಲ ಮಾಡಿಲ್ಲ. ನಮ್ಮ ಶಾಸಕರನ್ನು ಸೆಳೆಯುವ ಕೆಲಸ ಮಾಡುತ್ತಿರುವುದು ಕಾಂಗ್ರೆಸ್ ಹಾಗೂ ಜೆಡಿಎಸ್. ಕಾಂಗ್ರೆಸ್​ನವರೇ ಅನೇಕ ಬಿಜೆಪಿ ಶಾಸಕರ ಜೊತೆ ಸಂಪರ್ಕದಲ್ಲಿರುವುದಾಗಿ ಒಪ್ಪಿಕೊಂಡಿದ್ದಾರೆ. ಸ್ವತಃ ಈ ರಾಜ್ಯದ ಸಿಎಂ ಕುಮಾರಸ್ವಾಮಿಯವರೇ ನಮ್ಮ ಪಕ್ಷದ ಶಾಸಕನಿಗೆ ಮಂತ್ರಿ ಮಾಡುತ್ತೇನೆ, ದುಡ್ಡು ಕೊಡುತ್ತೇವೆ ಎಂದು ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ. 

      ತಾವು ಯಾವುದೇ ಅಪರೇಷನ್​ ಕಮಲಕ್ಕೆ ಮುಂದಾಗಿರಲಿಲ್ಲ ಎಂದು ಮತ್ತೊಮ್ಮೆ ಸಮರ್ಥಿಸಿಕೊಂಡ ಅವರು, ಲೋಕಸಭಾ ಚುನಾವಣೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಶಾಸಕರು ಕ್ಷೇತ್ರದಲ್ಲಿ ಬ್ಯುಸಿಯಾಗುತ್ತಾರೆ. ಈ ಹಿನ್ನೆಲೆಯಲ್ಲಿ ಈಗ ಬಿಡುವಿನ ವೇಳೆ ಒಟ್ಟಾಗಿ ಕಳೆಯೋಣ ಎಂದು ತೀರ್ಮಾನ ಮಾಡಿದ್ದೇವು. ಆ ಕಾರಣಕ್ಕೆ ನಮ್ಮೆಲ್ಲ ಶಾಸಕರನ್ನು ರೆಸಾರ್ಟ್​ಗೆ ಕರೆದುಕೊಂಡು ಹೋಗಲಾಗಿತ್ತು. ಅದಕ್ಕೆ ಬೇರಾವುದೇ ಅರ್ಥ ಕಲ್ಪಿಸಬೇಕಾಗಿಲ್ಲ. ನಾವೆಲ್ಲ ಒಟ್ಟಾಗಿದ್ದು ಮುಂದಿನ ಲೋಕಸಭೆ ಚುನಾವಣೆಯ ಬಗ್ಗೆ ಸಿದ್ದತೆ ಮಾಡುತ್ತಿದ್ದೇವೆ. ಎಂದು ತಿಳಿಸಿದ್ದಾರೆ. 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap