ನವದೆಹಲಿ:
ಭಾರತೀಯ ಸೇನೆಯ ಮಿಲಿಟರಿ ಪೊಲೀಸ್ ಪಡೆಯಲ್ಲಿ ಮಹಿಳೆಯರು ಕರ್ತವ್ಯ ನಿರ್ವಹಿಸಲು ಕೇಂದ್ರ ರಕ್ಷಣಾ ಸಚಿವಾಲಯ ಅನುಮತಿ ನೀಡುವ ಮೂಲಕ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ತಿಳಿದು ಬಂದಿದೆ.
ನಿನ್ನೆ ರಕ್ಷಣಾ ಸಚಿವೆ ನಿರ್ಮಲಾ ಸೀತರಾಮನ್ ಈ ಐತಿಹಾಸಿಕ ನಿರ್ಧಾರವನ್ನು ಜಾರಿಗೆ ತಂದಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿಂದೆ ಮಹಿಳೆಯರನ್ನು ಕೇವಲ ಸೇನಾ ಅಧಿಕಾರಿಗಳಾಗಿ ಆಯ್ದ ಶಾಖೆಗಳಿಗೆ ಮಾತ್ರ ನೇಮಿಸಿಕೊಳ್ಳಲಾಗುತ್ತಿತ್ತು. ಆದ್ರೆ ಇನ್ಮುಂದೆ ಮಹಿಳೆಯರು ಕೂಡ ಭಾರತೀಯ ಸೇನೆಯ ಮಿಲಿಟರಿ ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸಲು ಸರ್ಕಾರ ಅನುಮತಿ ನೀಡಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








