ಬೆಳಗಾವಿ:
ಕಾಂಗ್ರೆಸ್ ಶಾಸಕರ ನಡುವೆ ಹೊಡೆದಾಟ ನಡೆದಿರುವುದು ನಿಜ ಎಂದು ಮಾಜಿ ಸಿಎಂ, ಕಾಂಗ್ರೆಸ್ ಶಾಸಕಾಂಗ ಪಕ್ಷದ ಅಧ್ಯಕ್ಷ ಸಿದ್ದರಾಮಯ್ಯ ಅವರು ಒಪ್ಪಿಕೊಂಡಿದ್ದಾರೆ.
ಇಂದು ಕೊಪ್ಪಳದ ಗಂಗಾವತಿಯಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಶಾಸಕರಾದ ಜೆ.ಎನ್. ಗಣೇಶ್ ಹಾಗೂ ಆನಂದ್ ಸಿಂಗ್ ನಡುವೆ ಗಲಾಟೆ ಆಗಿದೆಯಂತೆ. ನಿನ್ನೆ ರಾತ್ರಿಯೇ ಮಾಹಿತಿ ಬಂದಿದೆ, ಮಾಧ್ಯಮಗಳ ಮೂಲಕವೂ ತಿಳಿಯಿತು ಎಂದು ಈಗಲ್ಟನ್ ರೆಸಾರ್ಟ್ನಲ್ಲಿ ತಮ್ಮ ಶಾಸಕರಿಬ್ಬರ ಮಧ್ಯೆ ನಡೆದ ಗಲಾಟೆಯನ್ನು ಒಪ್ಪಿಕೊಂಡಿದ್ದಾರೆ.
ಇನ್ನು ಯಾರದು ತಪ್ಪು? ಎನಾಯಿತು? ಎಂದು ಅಲ್ಲಿಗೆ ಹೋಗಿ ವಿಚಾರಿಸುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
