ನವದೆಹಲಿ:
ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಉಳಿದಿದ್ದು ಚುನಾವಣೆಯಲ್ಲಿ ಬಿಜೆಪಿಯನ್ನು ಶತಾಗತಾಯ ಸೋಲಿಸಲೇಬೇಕೆಂದು ಪಣ ತೊಟ್ಟಿರುವ ಪ್ರತಿಪಕ್ಷಗಳು ಮಹಾ ಮೈತ್ರಿಕೂಟ ಸ್ಥಾಪನೆ ಮಾಡಿಕೊಂಡಿದ್ದು ಆ ಮಹಾ ಮೈತ್ರಿಯ ನಾಯಕತ್ವವನ್ನು ಕಾಂಗ್ರೆಸ್ ವಹಿಸಿಕೊಳ್ಳುವುದು ಒಳಿತು ಎಂದು ಆರ್ ಜೆಡಿಯ ತೇಜಸ್ವಿ ಯಾದವ್ ಅಭಿಪ್ರಾಯ ಪಟ್ಟಿದ್ದಾರೆ.
ಪ್ರಾದೇಶಿಕ ಪಕ್ಷಗಳಿಗೆ ಸೂಕ್ತ ಆದ್ಯತೆ ನೀಡಿ, ನಾಯಕತ್ವ ಜವಾಬ್ದಾರಿಯನ್ನು ಸೂಕ್ತ ನಿರ್ವಹಿಸುವ ತಾಕತ್ತು ಹಳೆಯ ರಾಜಕೀಯ ಪಕ್ಷವಾಗಿರುವ ಕಾಂಗ್ರೆಸ್ ಪಕ್ಷಕ್ಕಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.