ಬೆಂಗಳೂರು
ಕುಟುಂಬದ ಖಾಸಗಿ ವಿಚಾರಗಳ ಬಗ್ಗೆ ಅನಗತ್ಯವಾಗಿ ಟೀಕೆ ಮಾಡಿದ ಹಿನ್ನೆಲೆಯಲ್ಲಿ ದಾಖಲಿಸಲಾಗಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಹಿನ್ನೆಲೆಯಲ್ಲಿ ಮೈಸೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರಿಗೆ ಸಮನ್ಸ್ ಜಾರಿ ಮಾಡಿದೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಪ್ರಕಾಶ್ ರಾಜ್, ” ಸಂಸದ ಪ್ರತಾಪ್ ಸಿಂಹ ವಿರುದ್ಧ ತಾವು ಹಾಕಿರುವ ಮಾನನಷ್ಟ ಮೊಕದ್ದಮೆ ವಿಚಾರಣೆ ಮುಂದಿನ ಹಂತ ತಲುಪಿದೆ. ಈ ಪ್ರಕರಣ ಕೆಲವು ದಿನಗಳ ಹಿಂದಷ್ಟೇ ಮೈಸೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯದಿಂದ ರಾಜಕಾರಣಿಗಳ ವಿಚಾರಣೆಗೆಂದೇ ನೇಮಕವಾದ ವಿಶೇಷ ನ್ಯಾಯಾಲಯಕ್ಕೆ ವರ್ಗವಾಗಿತ್ತು. ಇವತ್ತು, ವಿಶೇಷ ನ್ಯಾಯಾಲಯ ಅವರಿಗೆ ಸಮ್ಮನ್ಸ್ ಕಳುಹಿಸಿದೆ ಎಂದಿದ್ದಾರೆ.
” ತಮ್ಮ ಮತ್ತು ತಮ್ಮ ಕುಟುಂಬದ ಖಾಸಗಿ ಹಕ್ಕುಗಳನ್ನು ಉಲ್ಲಂಘನೆ ಮಾಡಿರುವ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸಿದ್ದೆ. ನಾನು ಸಂವಿಧಾನಬದ್ಧವಾದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಉಲ್ಲಂಘಿಸುವ ಉದ್ದೇಶ ಹೊಂದಿಲ್ಲ ಮತ್ತು ಯಾರದ್ದೇ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮೊಟಕುಗೊಳಿಸಿಲ್ಲ ಎಂಬುದನ್ನೂ ಈ ಮೂಲಕ ಸ್ಪಷ್ಟಪಡಿಸುತ್ತಿದ್ದೇನೆ ” ಎಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








