ಶ್ರೀಗಳಿಗೆ ಭಾರತ ರತ್ನ ಕೊಡಲು ಒತ್ತಾಯ

ಬೆಂಗಳೂರು

         ಶತಾಯುಷಿ, ನಮ್ಮ ನಡುವೆ ಇದ್ದ ನಡೆದಾಡುವ ದೇವರು ಡಾ. ಶಿವಕುಮಾರ ಸ್ವಾಮೀಜಿ ಅವರಿಗೆ ಕೇಂದ್ರ ಸರ್ಕಾರ ” ಭಾರತ ರತ್ನ ” ಪ್ರಶಸ್ತಿ ನೀಡಬೇಕೆಂಬ ಒತ್ತಾಯ ಪಕ್ಷಾತೀತವಾಗಿ ಕೇಳಿ ಬಂದಿದೆ.

         ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ, ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದ್ದು, ಕೇಂದ್ರ ಸರ್ಕಾರ ನಮ್ಮ ಮನವಿಯನ್ನು ಪರಿಗಣಿಲಿಸದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

         ಸ್ವಾಮೀಜಿಯವರಿಗೆ ಭಾರತ ರತ್ನ ನೀಡಬೇಕೆಂದು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದೆ. ಸ್ವಾಮೀಜಿಗಳು ಇಂತಹ ಪ್ರಶಸ್ತಿ – ಪಾರಿತೋಷಕಗಳನ್ನು ಮೀರಿ ಬದುಕಿದವರು. ಆದರೆ ಆ ಗೌರವ ಸ್ವಾಮೀಜಿಯವರಿಗೆ ಸಂದಿದ್ದರೆ ಆ ಪ್ರಶಸ್ತಿಯ ಗೌರವ ಹೆಚ್ಚಾಗುತ್ತಿತ್ತು ಎಂದರು.

         ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳ ನೇತೃತ್ವದಲ್ಲಿ ಒಂದು ಸರ್ಕಾರವೇ ಮಾಡಬೇಕಾಗಿರುವಷ್ಟು ಕೆಲಸವನ್ನು ಮಾಡುತ್ತಾ ಬರಲಾಗಿದೆ. ಅಲ್ಲಿನ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದು ವಿವಿಧ ಕ್ಷೇತ್ರಗಳಲ್ಲಿ ಉನ್ನತ ಹುದ್ದೆಗಳಲ್ಲಿರುವವರು ಇಂದು ವಿಶ್ವದಾದ್ಯಂತ ಇದ್ದಾರೆ ಎಂದರು.

         ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮಾತನಾಡಿ, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಅವರು ಸಲ್ಲಿಸಿದ ಸೇವೆ ಮತ್ತೊಬ್ಬರಿಂದ ಸಾಧ್ಯವಿಲ್ಲ. ಇಂತಹ ಅನನ್ಯ ಸೇವೆ ಪರಿಗಣಿಸಿ ಕೇಂದ್ರ ಸರಕಾರ “ಭಾರತ ರತ್ನ ” ಗೌರವ ನೀಡಬೇಕು. ಹಿಂದಿನಿಂದಲೂ ಕೇಂದ್ರ ಸರ್ಕಾರವನ್ನು ನಾವು ಒತ್ತಾಯಿಸುತ್ತಿದ್ದೇವೆ. ಈ ಬಾರಿ ಶ್ರೀಗಳಿಗೆ ಭಾರತ ರತ್ನ ಗೌರವ ನೀಡಬೇಕು ಎಂದು ಮನವಿ ಮಾಡಿದರು.

        ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ಡಾ. ಶಿವಕುಮಾರ ಸ್ವಾಮೀಜಿ ಅವರ ನಿಧನದಿಂದ ಎರಡನೇ ಬಸವ ಯುಗ ಅಂತ್ಯವಾಗಿದೆ. ಸ್ವಾಮೀಜಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದು ಪ್ರಧಾನಮಂತ್ರಿ ಅವರಿಗೆ ಒತ್ತಾಯಿಸುತ್ತೇವೆ. ಈ ಬಾರಿ ಪ್ರಶಸ್ತಿ ದೊರೆಯುವ ವಿಶ್ವಾಸವಿದೆ ಎಂದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link