ಬೆಂಗಳೂರು
ಹಿಂದಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ಬೈಕ್‍ನಲ್ಲಿ ಹೋಗುತ್ತಿದ್ದ ಇಬ್ಬರು ಮೃತಪಟ್ಟಿರುವ ದುರ್ಘಟನೆ ಹೆಬ್ಬಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ನಡೆದಿದೆ.
ಮೃತಪಟ್ಟವರನ್ನು ಅಮೃತ ಹಳ್ಳಿಯ ಶಿವರಾಜ್ (35) ಹಾಗೂ ಮುನೀಂದ್ರ (38)ಎಂದು ಗುರುತಿಸಲಾಗಿದೆ. ಕುಣಿಗಲ್ ಮೂಲದ ಶಿವರಾಜ್ ಹೋಟೆಲ್‍ವೊಂದರಲ್ಲಿ ಬಾಣಸಿಗನಾಗಿದ್ದು ಅಮೃತ ಹಳ್ಳಿಯಲ್ಲಿ ಮನೆಮಾಡಿಕೊಂಡು ವಾಸಿಸುತ್ತಿದ್ದು ಪಕ್ಕದ ಮನೆಯ ಕೃಷಿಕ ಮುನೀಂದ್ರ ಜೊತೆ ರಾತ್ರಿ 9.45ರ ವೇಳೆ ಬೈಕ್‍ನಲ್ಲಿ ದೇವಿನಗರ ಕ್ರಾಸ್ ಕಡೆಯಿಂದ ಅಮೃತಹಳ್ಳಿಯ ಮನೆಗೆ ಹೀರೋಹೊಂಡಾ ಸ್ಪ್ಲೆಂಡರ್ ಬೈಕ್ ನಲ್ಲಿ ಹೋಗುತ್ತಿದ್ದರು.
ಈ ವೇಳೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದ್ದು ಡಿಕ್ಕಿ ರಭಸಕ್ಕೆ ಕೆಳೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ದಾವಿಸಿದ ಹೆಬ್ಬಾಳ ಸಂಚಾರ ಪೊಲೀಸರು ಅಪಘಾತವಾದ ವಾಹನಗಳನ್ನು ತೆರವುಗೊಳಿಸಿ ಲಾರಿ ಚಾಲಕನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಸಾರಾ ಫಾತಿಮ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
