ಬೆಂಗಳೂರು
ಕಳೆದ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅಲೆಯ ವಿರುದ್ದ ಹೋರಾಟ ನಡೆಸಿ ಕಾಂಗ್ರೆಸ್ ಜಯಗಳಿಸಿದ 9 ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಬಾರದು. ಕಷ್ಟಕಾಲದಲ್ಲಿ ಕ್ಷೇತ್ರದ ಜನತೆ ಪಕ್ಷದ ಅಭ್ಯರ್ಥಿ ಕೈ ಹಿಡಿದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಪಕ್ಷದ ಹೈಕಮಾಂಡ್ ಗೆ ಒತ್ತಾಯಿಸಿದ್ದಾರೆ.
ಗೆದ್ದಂತಹ ಕ್ಷೇತ್ರಗಳನ್ನು ಉಳಿಸಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ. ಪಕ್ಷದ ಪ್ರಬಾಲ್ಯವಿರುವ ಕ್ಷೇತ್ರಗಳನ್ನು ತಮ್ಮಲ್ಲೇ ಉಳಿಸಿಕೊಳ್ಳಬೇಕೆಂದು ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಲೋಕಸಭಾ ಚುನಾವಣೆ ತಯಾರಿ ಸಂಬಂಧ ನಡಯುತ್ತಿರುವ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ,ಸುದ್ದಿಗಾರರೊಂದಿಗೆ ಮಾತನಾಡಿದರು.
ಹಳೆಯ ಮೈಸೂರು ಭಾಗದಲ್ಲಿ ಜೆಡಿಎಸ್ ಜೊತೆ ಸ್ಥಾನ ಹೊಂದಾಣಿಕೆ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ. ಈ ವೇಳೆ ಹಾಲಿ ಸಂಸದರು ಪ್ರತಿನಿಧಿಸುತ್ತಿರುವ ಕ್ಷೇತ್ರಗಳನ್ನು ಉಳಿಸಿಕೊಳ್ಳುವುದು ಅನಿವಾರ್ಯ ಎಂದು ವೀರಪ್ಪ ಮೊಯ್ಲಿ ಪ್ರತಿಪಾದಿಸಿದರು.ಕಾಂಗ್ರೆಸ್ ಗೆದ್ದಿರುವ ಚಿಕ್ಕಬಳ್ಳಾಪುರ, ತುಮಕೂರು,ಬೆಂಗಳೂರು ಗ್ರಾಮಾಂತರ,ಬಳ್ಳಾರಿ, ಕೋಲಾರ, ಶಿವಮೊಗ್ಗ, ಚಿತ್ರದುರ್ಗ ಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ಜೆಡಿಎಸ್ ಪಟ್ಟು ಹಿಡಿದಿರುವ ಹಿನ್ನಲೆಯಲ್ಲಿ ವೀರಪ್ಪ ಮೊಯ್ಲಿ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
