ಚಿಕ್ಕನಾಯಕನಹಳ್ಳಿ
ತಾಲ್ಲೂಕಿನ ಕುಪ್ಪೂರು ಗ್ರಾಮಕ್ಕೆ ಗ್ರಾಮ ವಿಕಾಸ ಯೋಜನೆ ಅಡಿಯಲ್ಲಿ 1 ಕೋಟಿ ಮಂಜೂರು ಆಗಿದೆ ಎಂದು ಶಾಸಕ ಜೆ.ಸಿ.ಮಾಧುಸ್ವಾಮಿ ಹೇಳಿದರು.
ತಾಲ್ಲೂಕಿನ ಕುಪ್ಪೂರು ಗ್ರಾಮದಲ್ಲಿ ಗ್ರಾಮ ವಿಕಾಸ ಯೋಜನೆಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಕುಪ್ಪೂರಿನ ಚರಂಡಿ, ಸಿ.ಸಿ.ರಸ್ತೆ ಕಾಮಗಾರಿ ಹಾಗೂ ನೈರ್ಮಲ್ಯ ಕಾಮಗಾರಿಗಳಿಗೆ ಹಣವನ್ನು ಉಪಯೋಗಿಸಿಕೊಳ್ಳುವಂತೆ ಸಲಹೆ ನೀಡಿದ ಅವರು ರಸ್ತೆಗಳು ಒತ್ತುವರಿ ಆಗಿದ್ದರೆ ಸ್ವಇಚ್ಛೆಯಿಂದ ತೆರವುಗೊಳಿಸಿ ಹಾಗೂ ಗುಣಮಟ್ಟದ ಕಾಮಗಾರಿಗಳನ್ನು ಮಾಡುವಂತೆ ಗುತ್ತಿಗೆದಾರರಿಗೆ ಸಲಹೆ ನೀಡಿದ ಅವರು ಎಸ್.ಸಿ, ಎಸ್.ಟಿ ಕಾಲೋನಿಗಳಿಗೆ ಹೆಚ್ಚಿನ ಹಣ ಬಿಡುಗಡೆ ಮಾಡಲಾಗುವುದು ಎಂದರು.
ಕುಪ್ಪೂರು ಗ್ರಾಮದ ಬಳಿ ಇರುವ ಕೆರೆಯಲ್ಲಿ ಜಾಲಿಗಿಡಗಳು ಹೆಚ್ಚಾಗಿ ಬೆಳೆದಿರುವುದರಿಂದ ಚಿರತೆ ಹಾವಳಿ ಹೆಚ್ಚಾಗಿದ್ದು, ಇವುಗಳನ್ನು ತೆರವುಗೊಳಿಸುವಂತೆ ಶಾಸಕರಲ್ಲಿ ಗ್ರಾಮಸ್ಥರು ಮನವಿ ಮಾಡಿದಾಗ ಸಣ್ಣ ನೀರಾವರಿ ಇಲಾಖಾ ವತಿಯಿಂದ ಕೆರೆಯಲ್ಲಿ ಬೆಳೆದಿರುವ ಜಾಲಿ ಗಿಡವನ್ನು ತೆರವುಗೊಳಿಸಲಾಗುವುದು ಎಂದರು.
ಕುಪ್ಪೂರು ಗ್ರಾ,.ಪಂ ಅಧ್ಯಕ್ಷ ಮುನಿಸ್ವಾಮಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶಂಕರಲಿಂಗಪ್ಪ, ಪಿ.ಎಲ್.ಡಿ ಬ್ಯಾಂಕ್ ನಿರ್ದೇಶಕ ಶಿವರಾಜ್, ಮಾಜಿ ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಎ.ನಿರಂಜನ್‍ಮೂರ್ತಿ, ಮಾಜಿ.ಗ್ರಾ.ಪಂ ಅಧ್ಯಕ್ಷರಾದ ಚಿಕ್ಕೇಗೌಡ, ಸೋಮಶೇಖರ್, ಯೋಗಾನಂದ್ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
