ಪಿಡಿಒ ನಾರಾಯಣಸ್ವಾಮಿ (57) ಆತ್ಮಹತ್ಯೆಗೆ ಶರನಾಗಿರುವ ಪಿಡಿಒ. ಇವರು ಮುಳಬಾಗಿಲು ತಾಲೂಕಿನ ಮುಷ್ಟೂರು ಗ್ರಾಮ ಪಂಚಾಯತ್ನಲ್ಲಿ ಪಿಡಿಒ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕಳೆದ ರಾತ್ರಿ ತೋಟದ ಮನೆಯ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ವೇಮಗಲ್ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಕೇಶವ ಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವೇಮಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.