ಬೆಂಗಳೂರು
ಬಾರ್‍ನಲ್ಲಿ ಮದ್ಯಪಾನ ಮಾಡಿ ಹೊರಬರುತ್ತಿದ್ದ ಆಟೋ ಚಾಲಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ದುಷ್ಕರ್ಮಿಗಳು ಪರಾರಿಯಾಗಿರುವ ದುರ್ಘಟನೆ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೆಂಗುಂಟೆಯ ಎಂಪಿಎಂ ಲೇಔಟ್‍ನ ರಘು (27)ಎಂದು ಕೊಲೆಯಾದವರನ್ನು ಗುರುತಿಸಲಾಗಿದೆ.ರಾತ್ರಿ 11.30ರ ವೇಳೆ ಜ್ಞಾನಭಾರತಿಯ ಎನ್‍ಜಿಎಫ್ ಲೇಔಟ್ ಸನ್ ಶೈನ್ ಬಾರ್ ಬಳಿ ರಘುನನ್ನು ಇಬ್ಬರು ದುಷ್ಕರ್ಮಿಗಳು ಕೊಚ್ಚಿಕೊಲೆ ಮಾಡಿ ಪರಾರಿಯಾಗಿದ್ದಾರೆ.
ಆಟೋ ಚಾಲಕನಾಗಿದ್ದ ರಘು ರಾತ್ರಿ ಸನ್ ಶೈನ್ ಬಾರ್ ಬಳಿ ಬಂದಿದ್ದು, ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು, ಆತನನ್ನು ಕೊಲೆಮಾಡಿ ಪರಾರಿಯಾಗಿದ್ದಾರೆ. ಹಳೆದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ.ಸ್ಥಳಕ್ಕೆ ದಾವಿಸಿರುವ ಜ್ಞಾನಭಾರತಿ ಪೊಲೀಸರು ಕೊಲೆ ಕೃತ್ಯ ಎಸಗಿ ಪರಾರಿಯಾಗಿರುವ ಇಬ್ಬರು ದುಷ್ಕರ್ಮಿಗಳಿಗಾಗಿ ತೀವ್ರ ಶೋಧ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








