ಹೊಳಲ್ಕೆರೆ:
ಯಾವುದೇ ಹಣ ಮತ್ತೀತರೆ ಆಮಿಷಗಳಿಗೆ ಒಳಗಾಗದೆ ಪ್ರಜಾ ಪ್ರಭುತ್ವದ ಮೌಲ್ಯಗಳನ್ನು ಮತ್ತು ಘನತೆಯನ್ನು ಎತ್ತಿ ಹಿಡಿಯಲು ಮತದಾರರು ಉತ್ತಮ ವ್ಯಕ್ತಿಗೆ ಮತದಾನ ಮಾಡಿ ದೇಶದ ಭವಷ್ಯವನ್ನು ರಕ್ಷಣೆ ಮಾಡುವ ಗುರುತರ ಜವಾಬ್ದಾರಿ ಮತದಾರರಿಗೆ ಮಾತ್ರ ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರೇಮಾ ವಸಂತರಾವ್ ಪವಾರ್ ಪ್ರತಿಪಾದಿಸಿದರು.
ತಾಲ್ಲುಕು ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ತಾಲ್ಲುಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಯೋಜನೆ ಇಲಾಖೆ, ಕಂದಾಯ ಇಲಾಖೆ, ತಾಲ್ಲೂಕು ಪಂಚಾಯತ್, ಶಿಶು ಅಬಿವೃಧ್ದಿ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮವನ್ನು ಗಿಡಕ್ಕೆ ನೀರು ಎರೆಯುವದರ ಮೂಲಕ ಉದ್ಘಾಟಿಸಿ ಮಾತನಾಡಿದರು.
1950 ಜನವರಿ 25ರಂದು ಭಾರತದ ಚುನಾವಣಾ ಆಯೋಗ ಅಸ್ತಿತ್ವಕ್ಕೆ ಬಂದಿತ್ತು. ರಾಷ್ಟ್ರೀಯ ಮತದಾರರ ದಿನಾಚರಣೆ 2011ರಂದು ಜಾರಿಗೆ ಬಂದಿದ್ದು ಇಲ್ಲಿಗೆ 9 ವರ್ಷಗಳು ಕಳೆದಿವೆ ಪ್ರತಿಯೊಬ್ಬ ಮತದಾರನು ರಾಜಕೀಯ ಪ್ರತಿನಿಧಿಯನ್ನು ಆಯ್ಕೆ ಮಾಡುವಾಗ ಮುಂದಿನ ದೇಶದ ಮತ್ತು ಸಮಾಜದ ಹಿತದೃಷ್ಟಿಯನ್ನು ಕಾಪಾಡುವ ಜನಪ್ರತಿನಿಧಿಯನ್ನು ಆಯ್ಕೆ ಮಾಡಿದರೆ ದೇಶದ ಅಭಿವೃಧ್ದಿ ಸಾಧ್ಯ ಈ ದಿಸೆಯಲ್ಲಿ ಪ್ರತಿಯೊಬ್ಬ ಮತದಾರರು ಕ್ಷಣಿಕ ಸಂತೋಷಕ್ಕಾಗಿ ತಮ್ಮ ಮತವನ್ನು ಮಾರಾಟ ಮಾಡಿಕೊಳ್ಳಬಾರದು ಎಂದು ನ್ಯಾಯಾಧೀಶೆ ಕಿವಿ ಮಾತು ಹೇಳಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶರಾದ ರವಿಕುಮಾರ್ ವಿ. ಮಾತನಾಡಿ ರಾಷ್ಟ್ರೀಯ ಮತದಾರರು ಯಾರ ಹೆಸರು ಮತದಾರರ ಪಟ್ಟಿಯಲ್ಲಿ ಸೇರಿಲ್ಲ ಅಂತಹವರು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಮತದಾನ ಮಾಡುವುದು ಅತ್ಯಂತ ನಮ್ಮದು ಪ್ರಜಾ ಪ್ರಭುತ್ವ ರಾಷ್ಟ್ರ. ಪ್ರಜಾ ಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನದ ಪಾತ್ರ ಅತ್ಯಂತ ಮಹತ್ವರವಾದುದು. ಮತದಾನ ಜನರ ಪ್ರಮುಖ ಹಕ್ಕು. ಪ್ರಜೆಗಳಿಂತ ಆಯ್ಕೆಯಾದ ಸರ್ಕಾರ ಜನರ ಆಶೋತ್ತರಗಳಂತೆಯೇ ನಡೆಯಬೇಕೆಂದು ಸಂವಿಧಾನದ ನಿಯಮ. ತಮ್ಮ ಓಳಿತನ್ನು ಬಯಸುವ ಜನಪರ ನಾಯಕನನ್ನು ಆಯ್ಕೆ ಮಾಡಲು ಮತದಾನ ಪ್ರಕ್ರಿಯೆ ನಡೆಯುತ್ತದೆ. ಮತದಾನದ ಪ್ರಾಮುಖ್ಯತೆ ಮತ್ತು ಪ್ರಜೆಗಳ ಮೇಲಿರುವ ಜವಾಬ್ದಾರಿಯ ಕುರಿತು ಜಾಗೃತಿ ಮೂಡಿಸುವುದಕ್ಕಾಗಿಯೇ 25 ರಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಮತದಾನ ಜವಾಬ್ದಾರಿಯ ಅರಿವಿದ್ದೂ ದೂರ ಉಳಿಯುವ ವಿದ್ಯಾವಂತರಿಗೆ ಹಾಗೂ ಅರಿವಿಲ್ಲದೆ ದೂರ ಉಳಿಯುವ ಅವಿದ್ಯಾವಂತರಿಗೆ ಮತದಾನದ ಬಗ್ಗೆ ಅರಿವು ಮೂಡಿಸುವುದು. 18 ವರ್ಷ ಮೇಲ್ಪಟ್ಟ ಎಲ್ಲ ಪ್ರಜೆಗಳೂ ಚುನಾವಣಾ ಸಂದರ್ಭದಲ್ಲಿ ಕಡ್ಡಾಯವಾಗಿ ಮತದಾನ ಮಾಡಬೇಕೆಂಬ ಸಂದೇಶ ಸಾರುವುದಕ್ಕಾಗಿ ಹಾಗೂ ಅವರಲ್ಲಿ ಮತದಾನದ ಹಕ್ಕು ಪಡೆಯುವಂತೆ ಸ್ಪೂರ್ತಿ ನೀಡುವುದು, ಆಹಕ್ಕಿನ ಕುರಿತು ಜಾಗೃತಿ ಮೂಡಿಸುವುದು ರಾಷ್ಟ್ರೀಯ ಮತದಾರರ ದಿನದ ಉದ್ದೇಶವಾಗಿದೆ ಎಂದರು.
ವಕೀಲರ ಸಂಘದ ಅಧ್ಯಕ್ಷ ಜಿ.ಇ.ರಂಗಸ್ವಾಮಿ ಮಾತನಾಡಿ ಉತ್ತಮ ವ್ಯಕ್ತಿಗಳನ್ನು ಆಯ್ಕೆಮಾಡಬೇಕು. ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿರುವ ಯಾವುದೇ ಅಭ್ಯರ್ಥಿಗಳಿಗೆ ನಿಮ್ಮ ಪವಿತ್ರವಾದ ಮತವನ್ನು ಹಾಕಬೇಡಿ ದೇಶದಲ್ಲಿ ಶೇಕಡಾ 30ರಷ್ಟು ಕ್ರಿಮಿನಲ್ ಸಂಸದರು ಇದ್ದಾರೆ. ಶ್ರೀಮಂತರು ಶೇಕಡಾ 60ರಷ್ಟು ಇದ್ದಾರೆ. ಇವರು ತಮ್ಮ ವ್ಯವಹಾರಗಳನ್ನು ರಕ್ಷಣೆ ಮಾಡಿಕೊಳ್ಳಲು ಮತದಾರರಿಗೆ ಹಣ ಹೆಂಡ ನೀಡಿ ಕಾನೂನು ಬಾಹಿರವಾಗಿ ಆಯ್ಕೆಯಾಗುತ್ತಿರುವುದರಿಂದ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗುತ್ತಿದೆ. ಪ್ರತಿಯೊಬ್ಬ ಮತದಾರರು ನಮ್ಮ ಹಕ್ಕನ್ನು ನಾವು ಕಳೆದುಕೊಳ್ಳಬಾರದು ದೇಶದ ರೂಪಿಸುವಂತ ಅರ್ಹ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕೆಂದು ಕರೆ ಮಾಡಿದರು. ವಕೀಲರಾದ ಎನ್.ಪಿ.ಹೇಮಂತರಾಜು ಮತದಾನದ ಮಹತ್ವದ ಬಗ್ಗೆ, ವಕೀಲ ಶಿವಮೂರ್ತಿ ಟಿ. ಮೂಲಭೂತ ಕರ್ತವ್ಯಗಳ ಬಗ್ಗೆ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ನಾಗರಾಜ ಕೆ. ಉಪನ್ಯಾಸಕರಾದ ಚೇತನ್, ವಕೀಲರ ಸಂಘದ ಉಪಾಧ್ಯಕ್ಷ ಆರ್.ಜಗದೀಶ್, ಕಾರ್ಯದರ್ಶಿ ಪ್ರದೀಪ್ ಕುಮಾರ್ ಉಪಸ್ಥಿತರಿದ್ದರು.ವಕೀಲ ಕಾಲ್ಕೆರೆ ವಿಜಯ್ ಕುಮಾರ್ ಪ್ರತಿಜ್ಞಾವಿಧಿ ಬೋಧಿಸಿದರು. ಮತ ಯಾಚನೆಗೆ ಬಂದಾಗ ಆಸೆ ಆಮಿಷಕ್ಕೆ ಬಲಿಯಾದರೆ ತಮ್ಮ ಮತವನ್ನು ಮಾರಿಕೊಳ್ಳುತ್ತಾನೆ. ಮತದಾನದ ಹಕ್ಕನು ಕಳೆದುಕೊಳ್ಳುತ್ತಾನೆ. ಮತ ಖರೀದಿ ಮಾಡಿಕೊಂಡರೆ ನಮ್ಮನ್ನು ನಾವು ಮಾರಿಕೊಳ್ಳುವ ಹಾಗೆ. ನಮ್ಮ ಮತ ಮಾರಾಟಕ್ಕಲ್ಲ ನಮ್ಮ ಕ್ಷೇತ್ರದ ಅಭಿವೃಧ್ದಿಯಾಗಬೇಕು ಎಂದು ನೇರ ಉತ್ತರ ನೀಡಬೇಕು ಎಂದು ಪ್ರಭಾರೆ ಸಿವಿಲ್ ನ್ಯಾಯಾಧೀಶರಾದ ರವಿಕುಮಾರ್ ವಿ. ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ