ಚಳ್ಳಕೆರೆ
ರಾಜ್ಯದಲ್ಲಿ ಕಳೆದ ಎಂಟು ತಿಂಗಳಿನಿಂದ ಆಡಳಿತ ನಡೆಸುತ್ತಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಸರ್ಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉತ್ತಮ ಆಡಳಿತವನ್ನು ನೀಡುತ್ತಿದ್ದು, ಮುಂಬರುವ ರಾಜ್ಯದ ಆಯವ್ಯಯದಲ್ಲಿ ಮತ್ತಷ್ಟು ಸೌಲಭ್ಯಗಳನ್ನು ನೀಡಲು ಚಿಂತನೆ ನಡೆಸಿದ್ದಾರೆಂದು ಜಿಲ್ಲಾ ಉಸ್ತುವಾರಿ ಸಚಿವರು, ಕಾರ್ಮಿಕ ಸಚಿವರಾದ ಪಿ.ವೆಂಕಟರಮಣಪ್ಪ ತಿಳಿಸಿದರು.
ಅವರು, ಶನಿವಾರ ಚಿತ್ರದುರ್ಗದಿಂದ ಪಾವಗಡಕ್ಕೆ ಚಲಿಸುವ ಸಂದರ್ಭದಲ್ಲಿ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸ್ವಲ್ಪಕಾಲ ವಿರಮಿಸಿದ್ದು, ಪತ್ರಿಕೆಯೊಂದಿಗೆ ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದರು. ಲೋಕಸಭಾ ಸದಸ್ಯ ಬಿ.ಎನ್.ಚಂದ್ರಪ್ಪ, ಕ್ಷೇತ್ರದ ಶಾಸಕ ಟಿ.ರಘುಮೂರ್ತಿ, ಜೆಡಿಎಸ್ ಹಿರಿಯ ದುರೀಣ ಎತ್ತನಹಟ್ಟಿಗೌಡ ಮುಂತಾದವರು ಉಪಸ್ಥಿತರಿದ್ದರು.
ಲೋಕಸಭಾ ಸದಸ್ಯ ಬಿ.ಎನ್.ಚಂದ್ರಪ್ಪ ಮಾತನಾಡಿ, ರಾಜ್ಯದಲ್ಲಿ ಜನತೆ ಅಪೇಕ್ಷೆ ಪಡುವ ಆಡಳಿತವನ್ನು ಮೈತ್ರಿಕೂಟದ ಸರ್ಕಾರ ನೀಡಲಿದೆ. ಅನಗತ್ಯವಾಗಿ ರಾಜ್ಯ ಸರ್ಕಾರದ ಪಥನದ ಬಗ್ಗೆ ವಿರೋಧ ಪಕ್ಷಗಳು ಮಾಡುತ್ತಿರುವ ಅಪಪ್ರಚಾರಕ್ಕೆ ಯಾರೂ ಕಿವಿಗೊಡಬಾರದು. ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಷ್ಟ್ರೀಯ ನಾಯಕರಾದ ಮಾಜಿ ಪ್ರಧಾನಿ ದೇವೇಗೌಡ, ಸಮನ್ವಯ ಸಮಿತಿ ಅಧ್ಯಕ್ಷ ಮಾಜಿ ಮುಖ್ಯಮಂತ್ರಿ ಎಸ್.ಸಿದ್ದರಾಮಯ್ಯ ಮಾರ್ಗದರ್ಶನದಲ್ಲಿ ಉತ್ತಮ ಆಡಳಿತ ನೀಡುವಲ್ಲಿ ಯಶಸ್ಸಿಯಾಗಿದ್ಧಾರೆ. ಮುಂಬರುವ ಎಲ್ಲಾ ರಾಜಕೀಯ ಬೆಳವಣಿಗೆಗಳು ನಮ್ಮ ಪಕ್ಷದ ಹೈಕಮಾಂಡ್ ನಿಗಾವಹಿಸಲಿದೆ ಎಂದರು.
ನಗರಸಭಾ ಸದಸ್ಯ ಎಂ.ಜೆ.ರಾಘವೇಂದ್ರ, ವೈ.ಪ್ರಕಾಶ್, ಟಿ.ಮಲ್ಲಿಕಾರ್ಜುನ, ಬಿ.ಟಿ.ರಮೇಶ್‍ಗೌಡ, ತಾಲ್ಲೂಕು ಪಂಚಾಯಿತಿ ಸದಸ್ಯ ಜಿ.ವೀರೇಶ್, ಪಕ್ಷದ ಮುಖಂಡರಾದ ಆರ್.ಪ್ರಸನ್ನಕುಮಾರ್, ಕೃಷ್ಣ, ಬಡಗಿಪಾಪಣ್ಣ, ಪಾಲಯ್ಯ, ನಾಗರಾಜು ಮುಂತಾದವರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








