ನೆಲಮಂಗಲ:
ರಾಜ್ಯದಲ್ಲಿ ಸಂಪೂರ್ಣ ಪಾನ ನಿಷೇಧಕ್ಕೆ ಆಗ್ರಹಿಸಿ ನಡೆಸುತ್ತಿದ್ದ ಪ್ರತಿಭಟನಾ ಜಾಥಾದಲ್ಲಿ ಪಾಲ್ಗೊಂಡಿದ್ದ ಮಹಿಳೆಯೊಬ್ಬರು ಬೈಕ್ ಡಿಕ್ಕಿ ಹೊಡೆದು ಮೃತಪಟ್ಟಿರುವ ದಾರುಣ ಘಟನೆ ನೆಲಮಂಗಲ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 4 ಕುಲವನಹಳ್ಳಿ ಬಳಿ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ಖೈರಾವಡಗಿಯ ರೇಣುಕಮ್ಮ (55)ಎಂದು ಗುರುತಿಸಲಾಗಿದೆ,ಸಂಪೂರ್ಣ ಮದ್ಯ ನಿಷೇಧಕ್ಕೆ ಆಗ್ರಹಿಸಿ ಸಾವಿರಾರು ಮಹಿಳೆಯರು ಚಿತ್ರದುರ್ಗದಿಂದ ಬೆಂಗಳೂರಿಗೆ ಕಾಲ್ನಡಿಗೆ ಹೊರಟ್ಟಿದ್ದರು.
ಜಾಥದಲ್ಲಿ ನಡೆದುಕೊಂಡು ಬರುವಾಗ ಮಾರ್ಗ ಮಧ್ಯೆ ರಾಷ್ಟ್ರೀಯ ಹೆದ್ದಾರಿ 4 ಕುಲವನಹಳ್ಳಿ ಬಳಿ ರೇಣುಕಮ್ಮ ಅವರಿಗೆ ಬೈಕ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಜಾಥಾದಲ್ಲಿ ಸುಮಾರು 2500ಕ್ಕೂ ಹೆಚ್ಚು ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು,ನಿನ್ನೆ ಸಿದ್ದಗಂಗಾ ಮಠದಿಂದ ಹೊರಟು ನೆಲಮಂಗಲ ತಾಲೂಕಿನ ಕುಲವನಹಳ್ಳಿಯಲ್ಲಿ ಜಾಥದ ಮಹಿಳೆಯರು ವಾಸ್ತವ್ಯ ಹೂಡಿದ್ದರು.ಈ ಜಾಥವು ಜನವರಿ 30 ರಂದು ಬೆಂಗಳೂರಿನ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದು, ದಾರಿ ಮಧ್ಯ ಈ ದುರ್ಘಟನೆ ಸಂಭವಿಸಿದೆ. ಈ ಘಟನೆಯ ಸಂಬಂಧ ನೆಲಮಂಗಲ ಸಂಚಾರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಾವಿಗೆ ಸರ್ಕಾರವೇ ಹೊಣೆ ಎಂದು ಪ್ರತಿಭಟನಾಕಾರರು ಆಕ್ರೋಶವನ್ನ ವ್ಯಕ್ತಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ