ಮಾಚಿದೇವ ಜಯಂತೋತ್ಸವದ ಪೂರ್ವಭಾವಿ ಸಭೆ

ಚಳ್ಳಕೆರೆ

         ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ಮಡಿವಾಳ ಸಮುದಾಯದ ವಿವಿಧ ಸಂಘಟನೆಗಳ ಸಹಕಾರದಿಂದ ಫೆ.1 ರಂದು ನಗರದ ದಲ್ಲಾರ ಸಮುದಾಯ ಭವನದಲ್ಲಿ ಮಡಿವಾಳ ಮಾಚಿದೇವ ಜಯಂತೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸಮುದಾಯದ ಎಲ್ಲಾ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ಸಿಗೊಳಿಸಬೇಕೆಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ತಹಶೀಲ್ದಾರ್ ಎಂ.ಮಲ್ಲಿಕಾರ್ಜುನ ತಿಳಿಸಿದರು.

         ಅವರು, ಸೋಮವಾರ ಇಲ್ಲಿನ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಡಿವಾಳ ಮಾಚಿದೇವ ಜಯಂತೋತ್ಸವ ಯಶಸ್ಸಿ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. 12ನೇ ಶತಮಾನದ ಜ್ಞಾನ ಜ್ಯೋತಿ ಜಗಜ್ಯೋತಿ ಬಸವೇಶ್ವರರ ಆದರ್ಶಗಳನ್ನು ಮೈಗೂಡಿಸಿಕೊಂಡ ಮಡಿವಾಳ ಮಾಚಿದೇವ ಸಮಾಜದಲ್ಲಿ ಅಡಗಿದ್ದ ಅಜ್ಞಾನದ ಕತ್ತಲನ್ನು ತಮ್ಮದೇಯಾದ ವಚನಗಳ ಮೂಲಕ ಬೆಳಕು ಚಲ್ಲಿದಂತಹ ಮಹಾನ್ ಶ್ರೇಷ್ಠರು. ಇವರ ಜಯಂತೋತ್ಸವ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವಂತೆ ಮನವಿ ಮಾಡಿದರು.

        ಮಡಿವಾಳ ಸಂಘದ ತಾಲ್ಲೂಕು ಅಧ್ಯಕ್ಷ ಎನ್.ಮಂಜುನಾಥ ಮಾತನಾಡಿ, ಪ್ರತಿವರ್ಷದಂತೆ ಈ ವರ್ಷವೂ ಸಹ ಈ ಕಾರ್ಯಕ್ರಮವನ್ನು ಭಕ್ತಿ ಶ್ರದ್ದೆಗಳಿಂದ ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಿದ್ದು, ಜಯಂತೋತ್ಸವ ಕಾರ್ಯಕ್ರಮದಲ್ಲಿ ಸಮುದಾಯದ ಎಲ್ಲಾ ಮುಖಂಡರು ಭಾಗವಹಿಸುವಂತೆ ಈಗಾಗಲೇ ಮನವಿ ಮಾಡಲಾಗಿದೆ. ಕಳೆದ ಹಲವಾರು ವರ್ಷಗಳಿಂದ ರಾಜಕೀಯ ಕ್ಷೇತ್ರವೂ ಸೇರಿದಂತೆ ಯಾವುದೇ ಕ್ಷೇತ್ರಗಳಲ್ಲೂ ಈ ಸಮಾಜಕ್ಕೆ ಸೂಕ್ತ ಸ್ಥಾನಮಾನ ನೀಡಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಸಮುದಾಯ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕೆಂದು ಅವರು ತಿಳಿಸಿದರು.

        ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಎಂ.ನಾಗರಾಜು, ಉಪಾಧ್ಯಕ್ಷ ಪುಟ್ಟಲಿಂಗಪ್ಪ, ಕಾರ್ಯದರ್ಶಿ ಕುಶಾಲಪ್ಪ, ಆರ್ಟ್‍ಸನ್ಸ್ ಪ್ರಕಾಶ್, ಎಚ್.ರಂಗಸ್ವಾಮಿ, ಕೃಷ್ಣಮೂರ್ತಿ, ಓಂಕಾರಪ್ಪ, ರಾಮಣ್ಣ, ಪಗಡಲಬಂಡೆ ನಾಗೇಂದ್ರಪ್ಪ, ಚೌಡಪ್ಪ, ದಶರಥಪ್ಪ ಮುಂತಾದವರು ಭಾಗವಹಿಸಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link