ಉಜ್ಜಯಿನಿ:
ಮಧುವೆಯ ಕಾರ್ಯಕ್ರಮಕ್ಕೆ ಹೋಗಿ ಹಿಂದಿರುಗುತ್ತಿದ್ದಾಗ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 12 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆದಿದೆ.
ದುರಂತದಲ್ಲಿ 12 ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ತಿಲಕೇಶ್ವರ್ ಕಾಲೋನಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳು ಎಂದು ಗುರುತಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇನ್ನೂ ಈ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ, ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕೂಡ ಸಂತಾಪ ಸೂಚಿಸಿದ್ದಾರೆ.