ರಾಮನಗರ:
ಈದ್ಗಾ ಮೈದಾನ ವಿಚಾರವಾಗಿ ಕೋರ್ಟ್ ಬಳಿಯೇ ಎರಡು ಗುಂಪಿನ ಜನರು ಗಲಾಟೆ ಮಾಡಿಕೊಂಡ ಘಟನೆ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ.
ಚನ್ನಪಟ್ಟಣ ನಗರದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿರುವ (2.10 ಗುಂಟೆ) ಈದ್ಗಾ ಮೈದಾನದ ಜಾಗ ನಮಗೆ ಸೇರಿದ್ದು ಎಂದು ಮುಸ್ಲಿಮರು ಪಟ್ಟು ಹಿಡಿದಿದ್ದು, ಪೊಲೀಸರ ಜತೆ ವಾಗ್ವಾದ ನಡೆಸಿದ್ದಾರೆ.
ಫೆಬ್ರವರಿ 2ರಂದು ಚನ್ನಪಟ್ಟಣ ನ್ಯಾಯಾಲಯವನ್ನು ಸಿಎಂ ಕುಮಾರಸ್ವಾಮಿ ಅವರು ಉದ್ಘಾಟನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಒಂದು ಕೋಮಿನ ಜನರು ಈದ್ಗಾ ಮೈದಾನ ಹಾಗೂ ಕೋರ್ಟ್ ಮಧ್ಯೆ ಶೀಟ್‍ಗಳಿಂದ ತಡೆಗೊಡೆ ನಿರ್ಮಿಸಿದ್ದಾರೆ. ಇದನ್ನು ವಿರೋಧಿಸಿ ಮತ್ತೊಂದು ಕೋಮಿನ ಜನರು ರಸ್ತೆಗೆ ಇಳಿದು ಪ್ರತಿಭಟನೆ ನಡೆದಿದ್ದಾರೆ.
ಎರಡು ಕೋಮಿನ ಜನರನ್ನು ಸಮಾಧಾನ ಪಡಿಸಲು ಪೊಲೀಸರು, ಅಧಿಕಾರಿಗಳ ಹರಸಾಹಸ ಪಡುತ್ತಿದ್ದಾರೆ. ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದರಿಂದ ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಪರಿಸ್ಥಿಯನ್ನು ತಿಳಿಗೊಳಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿ ಎರಡೂ ಗುಂಪಿನ ಜನರನ್ನು ಚದುರಿಸಿದ್ದಾರೆ. ಪರಿಸ್ಥಿತಿ ಬಿಗಡಾಯಿಸದಿರಲು ಬಂದೋಬಸ್ತ್ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
