ಹಿರಿಯೂರು ನಗರ ಅಭಿವೃದ್ಧಿಗೆ ಹಣ ಸಚಿವ ಶಿವಳ್ಳಿ ಭರವಸೆ

ಹಿರಿಯೂರು :

        ನಗರದ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಲಾಗುವುದು ಎಂಬುದಾಗಿ ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ಭರವಸೆ ನೀಡಿದರು.

       ಧಾರವಾಡ-ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಹಿರಿಯೂರಿಗೆ ಭೇಟಿ ನೀಡಿ, ನಗರಸಭೆ ಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜತೆ ನಗರದ ಅಭಿವೃದ್ಧಿಗೆ ಕುರಿತು ಚರ್ಚಿಸಿದರು.

       ಪುರಸಭೆ ಮತ್ತು ನಗರಸಭೆ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗೆ ಈಗಾಗಲೇ4-5ಕೋಟಿ ರೂ. ವಿಶೇಷ ಅನುದಾನ ನೀಡಲಾಗಿದ್ದು, ನಗರದ ವ್ಯಾಪ್ತಿಯಲ್ಲಿ ಕುಡಿವ ನೀರು ರಸ್ತೆ ಚರಂಡಿ ಸೇರಿ ಅಗತ್ಯ ಸೌಕರ್ಯಕ್ಕೆ ಕಲ್ಪಿಸಲು ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

         ಅಧ್ಯಕ್ಷೆ ಮಂಜುಳಾ ಹಾಗೂ ಸದಸ್ಯರು ಮಾತನಾಡಿ, ಹಿರಿಯೂರು ವೇಗವಾಗಿ ಬೆಳೆಯುತ್ತಿದ್ದು, ನಗರ ವ್ಯಾಪ್ತಿಯಲ್ಲಿ ಸುಸಜ್ಜಿತ ಒಳಚರಂಡಿ ವ್ಯವಸ್ಥೆ ಇಲ್ಲದಿರುವುದು ಮಳೆಗಾಲದಲ್ಲಿ ತೀವ್ರ ಸಮಸ್ಯೆಯಾಗುತ್ತಿದೆ. ಯುಜಿಡಿ ಯೋಜನೆ ಡಿಪಿಆರ್ ತಯಾರಿಸಿ ಅನುಮೋದನೆ ನೀಡು ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಸಚಿವರಿಗೆ ಮನವಿ ಮಾಡಿದರು.

        ಹಿರಿಯೂರಿನ ಸಮಗ್ರ ಅಭಿವೃದ್ಧಿ ಕುರಿತು ಕ್ರಿಯಾಯೋಜನೆ ತಯಾರಿಸಿ ಪ್ರಸ್ತಾವನೆ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷೆ ಇಮ್ರಾನ್ ಬಾನು, ಸದಸ್ಯರಾದ ಟಿ.ಚಂದ್ರಶೇಖರ್, ರವಿಚಂದ್ರನಾಯ್ಕ್, ಆಯುಕ್ತ ಮಹಾಂತೇಶ್, ವ್ಯವಸ್ಥಾಪಕಿ ಲೀಲಾವತಿ ಇತತರು ಉಪಸ್ಥಿತರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link