ಬೆಂಗಳೂರು :

ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಇಂದು ಇಡಿ ವಿಚಾರಣೆಗೆ ಹಾಜರಾಗುವಂತೆ ಡಿಕೆಶಿ ಕುಟುಂಬ ಸೇರಿದಂತೆ 9 ಮಂದಿಗೆ ನೋಟಿಸ್ ಜಾರಿಗೊಳಿಸಿದೆ.
ಡಿಕೆಶಿ ಗೆಳೆಯ ಸುನಿಲ್ ಶರ್ಮಾ, ಅಂಜನೇಯ, ರಾಜೇಂದ್ರ ಸೇರಿ ಐವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯದ ಮುಖ್ಯ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
ಐಟಿ ದಾಳಿ ವೇಳೆ ದೆಹಲಿಯ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಕೋಟ್ಯಾಂತರ ರೂ. ಹಣ ಪತ್ತೆಯಾಗಿತ್ತು. ಈ ಸಂಬಂಧ ಎಫ್ ಐಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಜನವರಿ 29 ಕ್ಕೆ ನೋಟಿಸ್ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








