ನೆಲ್ಲೂರು:
ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ತಾಯಿ ಶಕುಂತಲಮ್ಮ (89) ಇಂದು ಕೊನೆಯುಸಿರೆಳೆದಿದ್ದಾರೆ.
ಕಳೆದ ಕೆಲ ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಇಂದು(ಸೋಮವಾರ) ಬೆಳಗ್ಗೆ 7 ಗಂಟೆ ಸುಮಾರಿಗೆ ನೆಲ್ಲೂರಿನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಸದ್ಯ ಎಸ್‍ಪಿ ಬಾಲಸುಬ್ರಹ್ಮಣ್ಯಂ ಸಂಗೀತ ಕಾರ್ಯಕ್ರಮದ ನಿಮಿತ್ತ ಅವರು ಲಂಡನ್‌ಗೆ ಹೋಗಿದ್ದಾರೆ. ತಾಯಿಯ ನಿಧನ ಸುದ್ದಿ ತಿಳಿಯುತ್ತಿದ್ದಂತೆ ಎಸ್‍ಪಿಬಿ ತಕ್ಷಣವೇ ಸ್ವಗ್ರಾಮಕ್ಕೆ ಹಿಂತಿರುಗುತ್ತಿದ್ದು, ಇಂದು ಸಂಜೆ ಅವರು ಮನೆ ತಲುಪಲಿದ್ದಾರೆ ಎಂದು ಬಂಧುಗಳು ತಿಳಿಸಿದ್ದಾರೆ. ಶಕುಂತಲಮ್ಮ ಅಂತ್ಯಕ್ರಿಯೆಗಳು ನಾಳೆ(ಮಂಗಳವಾರ) ನಡೆಯಲಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ