ನವದೆಹಲಿ:

ನಡೆದಾಡುವ ದೇವರು, ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ತುಮಕೂರು ಸಂಸದ ಮುದ್ದ ಹನುಮೇಗೌಡ ಅವರು ಲೋಕಸಭೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ.
ಕಲಾಪದ ಶೂನ್ಯವೇಳೆಯಲ್ಲಿ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಮುಂದೆ ತುಮಕೂರು ಸಂಸದ ಮುದ್ದಗನುಮೇಗೌಡ ಕನ್ನಡದಲ್ಲೇ ತಮ್ಮ ತಮ್ಮ ಮನವಿ ಸಲ್ಲಿಸಿದ್ದು, ವಿಶ್ವದಲ್ಲಿ ಕೋಟ್ಯಂತರ ಭಕ್ತರನ್ನು ಹೊಂದಿರುವ ಶತಾಯುಷಿ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಬೇಕು. ಅಕ್ಷರ ದಾಸೋಹ, ಜ್ಞಾನ ದಾಸೋಹ, ಅನ್ನ ದಾಸೋಹ ಮೂಲಕ ಕೋಟ್ಯಂತರ ಭಕ್ತರನ್ನು ಹೊಂದಿದ್ದಾರೆ. ಅಲ್ಲದೇ ತಮ್ಮ 111 ವರ್ಷಗಳ ಜೀವನವನ್ನು ಸೇವೆಗಾಗಿಯೇ ಮುಡಿಪಾಗಿಟ್ಟಿದ್ದಾರೆ. ಆದ್ದರಿಂದ ಕೇಂದ್ರ ಸರ್ಕಾರ ಭಾರತ ರತ್ನ ಗೌರವವನ್ನು ನೀಡಬೇಕು ಎಂದು ಕೋರಿದ್ದಾರೆ.
ತ್ರಿವಿಧ ದಾಸೋಹಿ ಡಾ. ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕರ್ನಾಟಕ ಸರ್ಕಾರ ಶಿಫಾರಸು ಮಾಡಿದ್ದರೂ ಕೂಡ ಕೇಂದ್ರ ಸರ್ಕಾರ ನೀಡಿಲ್ಲ. ಇದರಿಂದ ಭಕ್ತರ ಮನಸ್ಸಿಗೆ ನೋವಾಗಿದೆ. ಶಿವಕುಮಾರ ಶ್ರೀಗಳಿಗೆ ಭಾರತ ರತ್ನ ನೀಡಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








