ಬೆಂಗಳೂರು:
ಐಟಿ ದಾಳಿ ವೇಳೆ ಡಿ.ಕೆ.ಶಿವಕುಮಾರ್ ಸಾಕ್ಷ್ಯ ನಾಶ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ನಾಶವನ್ನೇ ಮಾಡಿಲ್ಲ. ಸಾಕ್ಷ್ಯ ನಾಶ ಮಾಡಿದ್ರೆ ಪದೇ ಪದೆ ವಿಚಾರಣೆಗೆ ಯಾಕೆ ಹಾಜರಾಗುತ್ತಿದ್ದೆ ಎಂದು ಡಿಕೆಶಿ ಹೇಳಿದ್ದಾರೆ.
ಐಟಿ ಅಧಿಕಾರಿಗಳು ಪೂರ್ವಗ್ರಹಪೀಡಿತರಾಗಿ ಪ್ರಕರಣ ದಾಖಲು ಮಾಡಿದ್ದಾರೆ. ಸಾಕ್ಷ್ಯ ನಾಶವನ್ನೇ ಮಾಡದೆ ಆರೋಪಿ ಹೇಗೆ ಆಗ್ತೀನಿ ಎಂದು ಪ್ರಶ್ನೆ ಮಾಡಿ ಜನಪ್ರತಿನಿಧಿ ವಿಶೇಷ ನ್ಯಾಯಾಲಯದಲ್ಲಿ ಡಿಕೆಶಿ ಅರ್ಜಿ ಹಾಕಿದ್ದಾರೆ.ಇನ್ನು ಐಟಿ ಡಿಕೆಶಿ ಆಕ್ಷೇಪಣೆಗೆ ಮರು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೇಳಿದೆ. ಈ ಹಿನ್ನೆಲೆ ಜನಪ್ರತಿನಿಧಿ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆಗೆ ಕಾಲಾವಕಾಶ ನೀಡಿ ನ್ಯಾಯಾಲಯ ವಿಚಾರಣೆ ಮುಂದೂಡಿದೆ.
ಆದಾಯ ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಕಳೆದ ವರ್ಷ ಈಗಲ್ಟನ್ ರೆಸಾರ್ಟ್ ಮೇಲೆ ಐಟಿ ದಾಳಿ ನಡೆಸಿತ್ತು. ದಾಳಿ ವೇಳೆ ತಮ್ಮ ಬಳಿಯಿದ್ದ ಚೀಟಿಗಳನ್ನ ಹರಿದಿದ್ದಾರೆ ಎಂಬ ಆರೋಪ ಸಚಿವ ಡಿ.ಕೆ.ಶಿವಕುಮಾರ್ ಮೇಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ