ಬೆಂಗಳೂರು
ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದು ಆರ್ವಿ ಕಾಲೇಜಿನ ಸೆಕ್ಯುರಿಟಿಗಾರ್ಡ್ರೊಬ್ಬರು ಮೃತಪಟ್ಟಿರುವ ದಾರುಣ ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.
ಚನ್ನಪಟ್ಟಣದ ಅಮ್ಮಳ್ಳಿ ದೊಡ್ಡಿಯ ಸೋಮೇಗೌಡ (55)ಎಂದು ಮೃತಪಟ್ಟವರನ್ನು ಗುರುತಿಸಲಾಗಿದೆ.ಸೋಮವಾರ ರಾತ್ರಿ ಪಾಳಯದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗಲು ಬೆಳಿಗ್ಗೆ 6.30ರ ವೇಳೆ ಮೈಲಸಂದ್ರ ಗೇಟ್ ಬಳಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಬೈಕ್, ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಸೋಮೇಗೌಡ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಪ್ರಕರಣ ದಾಖಲಿಸಿರುವ ಕೆಂಗೇರಿ ಸಂಚಾರ ಪೊಲೀಸರು ಬೈಕ್ ಸವಾರನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಸೌಮ್ಯರಾಣಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








