ಬೆಂಗಳೂರು
ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡ ಅವರು ಮನಸ್ಸಿಗೆ ಬಂದಂತೆ ಹೇಳಿಕೆಕೊಡುವುದು ಸರಿಯಲ್ಲ. ಬಿಜೆಪಿ ಸರ್ಕಾರ ಅಸ್ಥಿರಗೊಳಿಸುತ್ತಿಲ್ಲ.ಅವರು ಮೊದಲು ತಮ್ಮ ಶಾಸಕರನ್ನು ಭದ್ರವಾಗಿ ಹಿಡಿದಿಟ್ಟುಕೊಳ್ಳಲು ಸಾಧ್ಯವಾಗದೆ ನಮ್ಮ ಮೇಲೆ ಆರೋಪಮಾಡುವುದು ಸರಿಯಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದರು.
ಸಮ್ಮಿಶ್ರ ಸರ್ಕಾರವನ್ನು ಅಸ್ಥಿರೊಗಳಿಸುವ ಪ್ರಯತ್ನವನ್ನು ಯಡಿಯೂರಪ್ಪ ಮಾಡುತ್ತಿದ್ದಾರೆಯೇ ಹೊರತು ಇದರಲ್ಲಿ ಪ್ರಧಾನಿ ಮೋದಿ ಅವರ ಪಾತ್ರ ಇಲ್ಲ ಎಂದು ದೇವೇಗೌಡ ನಿನ್ನೆ ಹೇಳಿಕೆ ನೀಡಿದ್ದರು.ದೇವೇಗೌಡರ ಹೇಳಿಕೆಗೆ ನಗರದಲ್ಲಿಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು,ಯಾವುದೇ ಕಾರಣಕ್ಕೂ ರಾಜ್ಯಪಾಲರ ಭಾಷಣಕ್ಕಾಗಲಿ ಬಜೆಟ್ ಮಂಡನೆಗಾಗಲಿ ಅಡ್ಡಿ ಮಾಡುತ್ತೇವೆ ಎಂದು ಬಿಜೆಪಿ ಶಾಸಕರು ಹೇಳಿಕೆ ಕೊಡದಂತೆ ಶಾಸಕರಿಗೆ ಸೂಚನೆ ನೀಡಿರುವುದಾಗಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.ವಿಧಾನಮಂಡಲ ಅಧಿವೇಶನದಲ್ಲಿ ಪಕ್ಷದ ತಂತ್ರಗಾರಿಕೆ ಬಗ್ಗೆ ಶಾಸಕರ ಜತೆ ಸಭೆಯಲ್ಲಿ ಮಾತುಕತೆ ನಡೆಸಲಾಗಿದೆ ಎಂದರು.