ನವದೆಹಲಿ :
ಲೋಕಸಭಾ ಚುನಾವಣೆಗೆ ಇನ್ನೂ ಕೆಲವೇ ತಿಂಗಳು ಬಾಕಿ ಇರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಅಯೋದ್ಯೆಯ ಅಭಿವೃದ್ಧಿಗೆ ಚಾಲನೆ ನೀಡಲು ಸಜ್ಜಾಗಿದೆ.
ಇದರ ಭಾಗವಾಗಿ ಕೇಂದ್ರ ಸರ್ಕಾರ 5300 ಕೋಟಿ ವೆಚ್ಚದಲ್ಲಿ 6 ಹೆದ್ದಾರಿಗಳ ನಿರ್ಮಾಣ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ತಯಾರಿ ನಡೆಯುತ್ತಿದೆ.
ಧಾರ್ಮಿಕವಾಗಿ ಮಹತ್ವ ಪಡೆದಿರುವ ಇಲ್ಲಿನ 84 ಕೋಸಿ ಪರಿಕ್ರಮ ಮಾರ್ಗ ಹಾಗೂ ರಾಮ ವನ ಗಮನ ಮಾರ್ಗವನ್ನು ಅಭಿವೃದ್ಧಿಪಡಿಸಲಾಗುತ್ತಿದೆ.
ಇನ್ನೂ ಅಭಿವೃಧಿಯ ಭಾಗವಾಗಿರುವ ಮಹತ್ವದ ಯೋಜನೆಗಳಿಗೆ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಶೀಘ್ರದಲ್ಲೇ ಚಾಲನೆ ನೀಡಲಿದ್ದಾರೆ.
2015ಕ್ಕೂ ಮುನ್ನವೇ ಈ ಮಹತ್ವದ ಯೋಜನೆಗಳ ರೂಪು ರೇಷೆಯನ್ನು ತಯಾರಿ ಮಾಡಿದ್ದು, ಆದರೆ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಭಾರೀ ಯೋಜನೆಗಳಿಗೆ ಚಾಲನೆ ನೀಡುತ್ತಿದೆ.
84 ಕೋಸಿ ಪರಿಕ್ರಮ ಮಾರ್ಗವನ್ನು ವಿಸ್ತರಣೆ ಮಾಡಿ ನಾಲ್ಕು ಪಥದ ರಸ್ತೆಯನ್ನಾಗಿಸಲಾಗುತ್ತಿದೆ. 250 ಕಿ.ಮೀ ಇರುವ ರಸ್ತೆಯನ್ನು 91 ಕಿ.ಮೀ ನಷ್ಟು ವಿಸ್ತರಣೆ ಮಾಡಲಾಗುತ್ತಿದೆ.
ಉತ್ತರ ಪ್ರದೇಶದ ಪವಿತ್ರ ನಗರಕ್ಕೆ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿಟ್ಟಿನಲ್ಲಿ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ







