ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭಿಸಲು ಸರ್ಕಾರ ಬದ್ಧ: ವಾಜುಭಾಯಿ ವಾಲಾ

ಬೆಂಗಳೂರು

Governor Vajubhai Vala addressed the Joint Session at Vidhana Soudha in Bengaluru on Monday. -KPN ### Joint Session at Vidhana Soudha

      ಸಮಾಜದ ಬಡ ವರ್ಗದ ಮಕ್ಕಳು ಇಂಗ್ಲಿಷ್ ಜ್ಞಾನದ ಕೊರತೆಯಿಂದಾಗಿ ಹಿಂದುಳಿಯಬಾರದು ಎಂಬ ಉದ್ದೇಶದಿಂದ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭಿಸಲು ಸರ್ಕಾರ ಬದ್ಧವಾಗಿದೆ ಎಂದು ರಾಜ್ಯಪಾಲ ವಜುಭಾಯಿ ವಾಲಾ ತಿಳಿಸಿದ್ದಾರೆ.

     ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ಮಾಡಿದ ಭಾಷಣದಲ್ಲಿ ಈ ವಿಷಯ ತಿಳಿಸಿರುವ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಉತ್ತಮ ಕೌಶಲ್ಯದೊಂದಿಗೆ ಜಾಗತಿಕ ಮಟ್ಟದಲ್ಲಿ ಸ್ಫರ್ಧಿಸಲು ಅನುವಾಗುವಂತೆ ಅವರನ್ನು ಸಜ್ಜುಗೊಳಿಸುವುದು ಅನಿವಾರ್ಯವಾಗಿದೆ. ಇದಕ್ಕೆ ಇಂಗ್ಲೀಷ್ ಭಾಷಾ ಜ್ಞಾನ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಹೇಳಿದರು.

      ಆಂಗ್ಲ ಮಾಧ್ಯಮಕ್ಕೆ ಒತ್ತುಕೊಡುವ ಭರದಲ್ಲಿ ಕನ್ನಡಕ್ಕೆ ಪ್ರಾಮುಖ್ಯತೆ ನೀಡುವ ವಿಷಯದಲ್ಲಿ ಯಾವುದೇ ರಾಜಿಯಾಗುವುದಿಲ್ಲ. ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯಗಳನ್ನು ಮೇಲ್ದರ್ಜೆಗೇರಿಸಲು 450 ಕೋಟಿ ರೂ. ಯೋಜನೆಯನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

      ಉನ್ನತ ಶಿಕ್ಷಣ ಪಡೆಯುವ ಮೂರು ಲಕ್ಷ ವಿದ್ಯಾರ್ಥಿನಿಯರಿಗೆ ಶುಲ್ಕ ವಿನಾಯಿತಿ ನೀಡಲು ಸರ್ಕಾರ 95 ಕೋಟಿ ರೂ. ಭರಿಸಿದೆ. ಜತೆಗೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಇಂಜಿನಿಯರಿಂಗ್ ಕಾಲೇಜುಗಳ ಮೂಲ ಸೌಕರ್ಯಕ್ಕಾಗಿ ಸುಮಾರು 750 ಕೋಟಿ ರೂ ಬಿಡುಗಡೆ ಮಾಡಿದೆ ಎಂದು ಹೇಳಿದರು.

      ‘ಅರಿವು’ ಯೋಜನೆಯಡಿ ವೃತ್ತಿ ಪರ ಕೋರ್ಸ್‍ಗಳನ್ನು ವ್ಯಾಸಂಗ ಮಾಡಲಿಚ್ಚಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಕಳೆದ ವರ್ಷ 70 ಕೋಟಿ ರೂ ಮಂಜೂರು ಮಾಡಿದೆ. ಜತೆಗೆ, ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 14.55 ಲಕ್ಷ ವಿದ್ಯಾರ್ಥಿಗಳಿಗೆ ವಿವಿಧ ವಿದ್ಯಾರ್ಥಿ ವೇತನ ಯೋಜನೆಗಳಡಿ 290 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ರಾಜ್ಯಪಾಲ ವಜುಭಾಯಿ ವಾಲಾ ತಿಳಿಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link