ನಗರದ ಸಾರಿಗೆ ವಾಹನಗಳಿಗೆ “ಚತುರ ಸಾರಿಗೆ ವ್ಯವಸ್ಥೆ ” ಅಳವಡಿಸಲಾಗುತ್ತಿದೆ: ವಾಜುಭಾಯಿ ವಾಲಾ

ಬೆಂಗಳೂರು

         ನಾಗವರ ಮೆಟ್ರೋ ನಿಲ್ದಾಣದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಹಂತ 2 ಬಿ ಅನ್ನು ಆದ್ಯತೆ ಮೇಲೆ ಕೈಗೊಳ್ಳಲಾಗುತ್ತದೆ ಎಂದು ರಾಜ್ಯಪಾಲ ವಜೂಭಾಯಿವಾಲಾ ತಿಳಿಸಿದ್ದಾರೆ.

        ಇಂದು ಆರಂಭವಾದ ರಾಜ್ಯ ವಿಧಾನಮಂಡಲದ ಅಧಿವೇಶನದಲ್ಲಿ ಉಭಯ ಸದನಗಳನ್ನುದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರು ನಗರದ ಸಾರಿಗೆ ವ್ಯವಸ್ಥೆಯನ್ನು ಬಲಗೊಳಿಸುವುದು ಸರ್ಕಾರದ ಆದ್ಯತೆಯಾಗಿದ್ದು ಬೆಂಗಳೂರು ನಗರದ ಕೇಂದ್ರ ಭಾಗದಲ್ಲಿ ಚತುರ ಸಂಚಾರಿ ನಿರ್ವಹಣಾ ವ್ಯವಸ್ಥೆ ಅನುಷ್ಠಾನಗೊಳಿಸಲಾಗುತ್ತಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಾಹನಗಳಿಗೆ ಚತುರ ಸಾರಿಗೆ ವ್ಯವಸ್ಥೆ ಅಳವಡಿಕೆ, ನಗದುರಹಿತ ವ್ಯವಹಾರಕ್ಕಾಗಿ ಪಾಯಿಂಟ್ ಆಫ್ ಸೇಲ್ (ಪಿಓಎಸ್) ಯಂತ್ರಗಳ ಬಳಕೆ ಆರಂಭಿಸಲಾಗಿದೆ. ಹೆಚ್ಚುವರಿ ಬಸ್‍ಗಳ ಸೇರ್ಪಡೆ ಜೊತೆಗೆ ಡಿಪೆÇೀ ಮತ್ತು ಬಸ್ ಟರ್ಮಿನಲ್ ಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

         ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ 3.98 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ಸೇರಿದಂತೆ 15.53 ಲಕ್ಷ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಬಸ್ ಪಾಸ್ ನೀಡಲಾಗಿದೆ.

      ಕೇವಲ ಸಾರಿಗೆ ಮಾತ್ರವಲ್ಲದೇ ಇಡೀ ನಗರವನ್ನು ಸ್ಮಾರ್ಟ್ ಆಗಿಸಲು 26 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆನ್‍ಲೈನ್ ಸ್ವಯಂ ಚಾಲಿತ ಕಟ್ಟಡ ನಕ್ಷೆ ಅನುಮೋದನಾ ವ್ಯವಸ್ಥೆ ಜಾರಿಗೊಳಿಸಲಾಗಿದ್ದು ಇದನ್ನು ಶೀಘ್ರವೇ ರಾಜ್ಯಾದ್ಯಂತ ವಿಸ್ತರಿಸುವ ಗುರಿ ಹೊಂದಲಾಗಿದೆ.

       ಹುಬ್ಬಳ್ಳಿ ಧಾರವಾಡ, ಮಂಗಳೂರು, ದಾವಣಗೆರೆ, ಬೆಳಗಾವಿ ಹಾಗೂ ತುಮಕೂರು ಸ್ಮಾರ್ಟ್ ಸಿಟಿಗಳಲ್ಲಿನ ನಗರ ಸ್ಥಳೀಯ ಸಂಸ್ಥೆಗಳ ಎಲ್ಲಾ ಆನ್‍ಲೈನ್ ಸೇವೆಗಳನ್ನು ಏಕೀಕೃತಗೊಳಿಸಲು ನಿರ್ದೇಶನ ಮತ್ತು ನಿಯಂತ್ರಣ (ಕಮ್ಯಾಂಡ್ ಮತ್ತು ಕಂಟ್ರೋಲ್) ಕೇಂದ್ರಗಳ ಸ್ಥಾಪನೆಗೆ ಸಿದ್ಧತೆ ನಡೆದಿದೆ. ಬೆಂಗಳೂರು ನಗರದಲ್ಲಿ ಉಪನಗರ ರೈಲು ಸಂಪರ್ಕ ಸೌಲಭ್ಯ ಹೆಚ್ಚಿಸಲು ರೈಲ್ವೆ ಸಚಿವಾಲಯದೊಂದಿಗೆ ವಿಶೇಷ ಸಂಸ್ಥೆ (ಸ್ಪೆಷಲ್ ಪರ್ಪಸ್ ವೆಹಿಕಲ್) ಸ್ಥಾಪಿಸಲು ಸಹ ಉದ್ದೇಶಿಲಾಗಿದೆ ಎಂದು ರಾಜ್ಯಪಾಲರು ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link