ಕರ್ನಾಟಕದಲ್ಲಿ ಕಳೆದ 8 ತಿಂಗಳಿಂದ ಅಧಿಕಾರ ನಡೆಸುತ್ತಿರುವ ‘CoJa’ ಸರ್ಕಾರ ರೈತರ ಆತ್ಮಹತ್ಯೆ ತಡೆಯಲು ಸಂಪೂರ್ಣ ವಿಫಲವಾಗಿದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಮಾರ್ಮಿಕವಾಗಿ ಟ್ವೀಟ್ ಮಾಡುವ ಮೂಲಕ ಹೊಸ ವಿವಾದ ಸೃಷ್ಠಿಸಿದ್ದಾರೆ.
ಬಜೆಟ್ ನಲ್ಲಿ ರೈತರಿಗೆ ಘೋಷಣೆ ಮಾಡಿದ ವಿಶೇಷ ಯೋಜನೆಗಳ ಅನುಷ್ಠಾನಕ್ಕೆ ಯಾವುದೇ ಅಡ್ಡಿಆತಂಕಗಳಿಲ್ಲದೆ ಕೂಡಲೇ ಜಾರಿಗೆ ಅನುವಾಗುವಂತೆ ಕೇಂದ್ರ ಸರ್ಕಾರ ಸೂಚಿಸಿರುವುದು ಸಂತಸದ ಸುದ್ಧಿ. ಸಾಲ-ಮನ್ನಾ ಮಾಡುತ್ತೇವೆ ಎಂದು ಹೇಳಿ ಅಧಿಕಾರ ಕಬಳಿಸಿದ #CoJa ಸರ್ಕಾರಕ್ಕೆ ೮ ತಿಂಗಳಾದರೂ ರೈತರ ಆತ್ಮಹತ್ಯೆ ತಡೆಯಲಾಗುತ್ತಿಲ್ಲ.https://t.co/Ej3O11niTD
— Anantkumar Hegde (@AnantkumarH) February 6, 2019