ಬೆಂಗಳೂರು:
ಮುಖ್ಯಮಂತ್ರಿ ಸಿನಿಮಾ ಕ್ಷೇತ್ರದಿಂದ ಬಂದವರು. ಈ ರೀತಿ ಆಡಿಯೋ ಮಾಡುವುದರಲ್ಲಿ ಅನುಭವಸ್ಥರು ಎಂದು ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ವ್ಯಂಗ್ಯವಾಡಿದ್ದಾರೆ.
ದೇವದುರ್ಗದ ಐಬಿಯಲ್ಲಿ ಬಿಎಸ್ವೈ ಆಪರೇಷನ್ ಕಮಲ ಮಾಡುತ್ತಿದ್ದಾರೆ ಎಂದು ಆಪಾದಿಸಿ ಸಿಎಂ ಕುಮಾರಸ್ವಾಮಿ ಬಿಡುಗಡೆ ಮಾಡಿದ ಆಡಿಯೋ ವಿರುದ್ಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿನಿಮಾ ಹಿನ್ನೆಲೆಯಿಂದ ಬಂದವರಿಗೆ ಈ ರೀತಿ ಆಡಿಯೋ ಮಾಡುವುದರಲ್ಲಿ ಅನುಭವವಿದೆ. ಅವರೇ ನಮ್ಮ ಶಾಸಕರನ್ನು ಗೋವಾಗೆ ಕರೆದುಕೊಂಡು ಹೋಗಿದ್ದರು. ಮುಖ್ಯಮಂತ್ರಿ ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದುಕೊಂಡು ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರ ಫೋನ್ ಟ್ಯಾಪಿಂಗ್ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಸಿಎಂ ತಮ್ಮ ತಪ್ಪುಗಳನ್ನು ಮರೆಮಾಚಲು ಯಡಿಯೂರಪ್ಪ ಆಪರೇಷನ್ ಕಮಲ ಮಾಡುತ್ತಿದ್ದಾರೆ ಎಂದು ಹೇಳಿಕೆ ಕೊಡುತ್ತಿದ್ದಾರೆ. ಮಿಮಿಕ್ರಿ ಕಲಾವಿದರಿಂದ ಆಡಿಯೋ ರೆಕಾರ್ಡ್ ಮಾಡಿರಬಹುದೆಂದು ದೂರಿದ್ದಾರೆ.