ಬಳ್ಳಾರಿ
ಹಂಪಿಯಲ್ಲಿ ಮಾರ್ಚ್ 2 ಮತ್ತು 3 ರಂದು ನಡೆಯಲಿರುವ ಹಂಪಿ ಉತ್ಸವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಅಧಿಕಾರಿಗಳೊಂದಿಗೆ ಶುಕ್ರವಾರ ಹಂಪಿಯಲ್ಲಿ ವೇದಿಕೆ ಸಿದ್ಧತೆಯ ಬಗ್ಗೆ ಪರಿಶೀಲನೆ ನಡೆಸಿದರು.
ಕಮಲಾಪುರದಿಂದ ಹಂಪಿಗೆ ತೆರಳುವ ಮಾರ್ಗದಲ್ಲಿನ ಸರಕಾರಿ ಅತಿಥಿ ಗೃಹ ಬಳಿಯ ಎರಡು ಸ್ಥಳದಲ್ಲಿ ಬಸ್ ತಂಗುದಾಣಕ್ಕೆ ಅಗತ್ಯ ಸಿದ್ದತೆ ನಡೆಸುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ, ಕೆ.ಎಸ್.ಆರ್.ಟಿ.ಸಿ ಬಸ್ ನಿಲುಗಡೆಗೆ ಬೇಕಾದ ವ್ಯವಸ್ಥೆ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಹಾಗೂ ಮಹಾನವಮಿ ದಿಬ್ಬಕ್ಕೆ ಭೇಟಿ ನೀಡಿ ರಾಯಲ್ ಶೋ ಕಾರ್ಯಕ್ರಮಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹೆಚ್ಚಿನ ಜನಸಂಖ್ಯೆಯಲ್ಲಿ ಭಾಗವಹಿಸುವ ನೀರಿಕ್ಷೆಯಿದ್ದು, ಇದಕ್ಕಾಗಿ ಕುಡಿಯುವ ನೀರು, ಶೌಚಾಲಯ ಮತ್ತು ಸ್ವಚ್ಛತೆಗೆ ಆದ್ಯತೆ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಬಳ್ಳಾರಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲಾವಣ್ಯ, ಹೊಸಪೇಟೆ ಸಹಾಯಕ ಆಯುಕ್ತ ಲೋಕೇಶ್, ಭಾರತೀಯ ಪುರಾತತ್ವ ಇಲಾಖೆಯ ಅಧಿಕಾರಿ ಕಾಳೀಮುತ್ತು, ಲೋಕೋಪಯೋಗಿ ಇಲಾಖೆ, ಪೊಲೀಸ್ ಹಾಗೂ ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ